Wednesday, January 22, 2025

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತು ಎಂಬ ಬಿ.ಕೆ ಹರಿಪ್ರಸಾದ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷದ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಸರ್ಕಾರ ಬಹಳಷ್ಟು ಚೆನ್ನಾಗಿ ನಡೆಯುತ್ತಿದೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಿ ಅಸಮಾಧಾನ ಇದೆ? ಯಾರು ಅಸಮಾಧಾನಗೊಂಡಿದ್ದಾರೆ? ಅದರ ಬಗ್ಗೆ ಏನು ಗೊತ್ತಿಲ್ಲ. ಸದ್ಯ ಕಾಂಗ್ರೆಸ್ ಸರ್ಕಾರ ಬಹಳಷ್ಟು ಉತ್ತಮವಾಗಿ ಆಡಳಿತ ಮಾಡುತ್ತಿದೆ. ಎಲ್ಲಾ ಆಕಾಂಕ್ಷೆಗಳನ್ನು ಸಮಾಧಾನ ಮಾಡಲು, ಎಲ್ಲಾ ಸಮಯದಲ್ಲಿ ಸಾಧ್ಯವಿಲ್ಲ. ಸಣ್ಣ ಪುಟ್ಟ ಅಸಮಾಧಾನಗಳಿದ್ರೆ, ಅದನ್ನು ಸಮಾಧಾನ ಮಾಡುವ ಶಕ್ತಿ ಕಾಂಗ್ರೆಸ್ ನಾಯಕರಿಗೆ ಇದೆ. ಅಸಮಾಧಾನ ಸರಿ ಮಾಡಿಕೊಂಡು ಉತ್ತಮ ಆಡಳಿತ ನೀಡುತ್ತೇವೆ ಎಂದು ಹೇಳಿದರು.

ದರ ಏರಿಕೆ ಅನಿವಾರ್ಯ

ನಂದಿನಿ ಹಾಲಿನ ದರ ಏರಿಕೆ ವಿಚಾರವಾಗಿ ಮಾತನಾಡಿ, ಹಾಲಿನ ದರ ಏರಿಕೆ ಬಹಳಷ್ಟು ದಿನದಿಂದ ಇತ್ತು. ಈ ಬಗ್ಗೆ ರೈತ ಮತ್ತು ಸರಬರಾಜು ಮಾಡುವವರ ಜೊತೆಗೆ ಚರ್ಚೆ ನಡೆಯುತ್ತಿದೆ. ಎಲ್ಲಾ ಅಗತ್ಯ ವಸ್ತುಗಳ ದರ ಏರಿಕೆಯಾಗಿದೆ. ಏನಾದರೂ ಯೋಜನೆ ಜಾರಿ ಮಾಡಬೇಕಾದರೆ ದರ ಏರಿಕೆ ಅನಿವಾರ್ಯವಾಗುತ್ತದೆ. ಇನ್ನೂ ಜಾರಿಯಾಗಿಲ್ಲ‌, ಇನ್ನೂ ಸಮಯಿದೆ. ನೋಡೋಣ ಇನ್ನೂ ಯಾವ ರೂಪದಲ್ಲಿ ಏರಿಕೆ ಆಗಲಿದೆ ಅಂತ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

RELATED ARTICLES

Related Articles

TRENDING ARTICLES