ಬೆಂಗಳೂರು: ನನಗೆ ಸಿಎಂ ಮಾಡೋದು ಗೊತ್ತಿದೆ ಕೆಳಗೆ ಇಳಿಸೋದು ಗೊತ್ತಿದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ದೇವರ ದರ್ಶನಕ್ಕಾಗಿ ದೇವಾಲಯಕ್ಕೆ ಬಂದ ಕರಡಿ : ಆತಂಕದಲ್ಲಿ ಭಕ್ತರು!
ಬೆಂಗಳೂರಿನಲ್ಲಿ ನಡೆದ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮನ್ನ ಬಹಳ ವ್ಯವಸ್ಥಿತವಾಗಿ ತುಳಿಯುತ್ತಿದ್ದಾರೆ, ನಾನು ಮಂತ್ರಿ ಆಗೋದು ಬಿಡುದೋ ಬೇರೆ ಪ್ರಶ್ನೆ ದೇಶದ ಬೇರೆ ರಾಜ್ಯಗಳಲ್ಲಿನ ಐವರು ಸಿಎಂ ಆಯ್ಕೆಯಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದೇನೆ, ಛತ್ತೀಸ್ ಘಢ ಸಿಎಂ ನಮ್ಮ ನೆಂಟರು ಅಲ್ಲ, ಹಿಂದುಳಿದ ವರ್ಗದವರನ್ನು ಸಿಎಂ ಮಾಡಿದ್ದೇನೆ ನನಗೆ ಮುಖ್ಯಮಂತ್ರಿ ಮಾಡೋದು ಚನ್ನಾಗಿ ಗೊತ್ತಿದೆ ಮುಖ್ಯಮಂತ್ರಿಗಳನ್ನ ಕೆಳಗೆ ಇಳಿಸೋದು ಗೊತ್ತಿದೆ ಎಂದಿದ್ದಾರೆ.
ನಾನು ಯಾರ ಬಳಿಯೂ ಭಿಕ್ಷೆ ಬೇಡೋದಿಲ್ಲ, ಎದೆ ಕೊಟ್ಟು ನಿಲ್ಲುತ್ತೇನೆ ಇಲ್ಲ ಅಂದಿದ್ದರೇ ಬೆಂಗಳೂರಿನಲ್ಲಿ 46 ವರ್ಷ ರಾಜಕಾರಣ ಮಾಡಲು ಆಗುತ್ತಿರಲಿಲ್ಲ, ನಮ್ಮನ್ನು ಓಡಿಸಿ ಬಿಡುತ್ತಿದ್ದರು ಅದರಲ್ಲಿ ನಮ್ಮವರು ಇರುತ್ತಾರೆ.
ಕರ್ನಾಟಕದಲ್ಲಿ ಏನೇ ಪ್ರಯತ್ನ ಮಾಡಿದರು ರಾಜಕೀಯವಾಗಿ ಈಡಿಗ ಸಮುದಾಯದವರು ಮುಂದೆ ಬರುತ್ತಿಲ್ಲ. ಅವಕಾಶ ವಂಚಿರಾಗುತ್ತಿರುವುದು ನೋಡಿದರೆ ಯಾರದ್ದೊ ಷಡ್ಯಂತ್ರಕ್ಕೆ ಬಲಿಯಾಗುತ್ತಿದ್ದೇವೆ ಅನ್ನಿಸುತ್ತದೆ ಎಂದರು.