Friday, May 17, 2024

ರಾಜ್ಯ ಬಿಜೆಪಿ ‘ಲೀಡರ್ ಲೆಸ್ ಪಾರ್ಟಿ’ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಅನ್ನೋದು ಹೋಗಿಬಿಟ್ಟಿದೆ. ಬಿಜೆಪಿ ಲೀಡರ್ ಲೆಸ್ ಪಾರ್ಟಿ ಎಂದು ಮಾಜ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟಕ್ಕರ್ ಕೊಟ್ಟರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ಕಪಿಮುಷ್ಠಿಯಲ್ಲಿದೆ ಅಂತ ನಾನು ಮೊದಲಿಂದ ಹೇಳುತ್ತಿದ್ದೆ. ಅದು ಈಗ ಸಾಬೀತು ಆಗಿದೆ. ಅದರಿಂದ ಬಿಜೆಪಿ ಇನ್ನೂ ಹೊರಬಂದಿಲ್ಲ. ಪ್ರತಿಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆಸುವ ಶೋಚನೀಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ ಎಂದು ಕುಟುಕಿದರು.

ಒಂದು ರಾಷ್ಟ್ರೀಯ ಪಕ್ಷಕ್ಕೆ ವಿಪಕ್ಷನಾಯಕನಿಲ್ಲದರುವುದು ನಾನು ಯಾವತ್ತೂ ನೋಡಿಲ್ಲ. ಇದು ಬಿಜೆಪಿ ಲೀಡರ್ ಲೇಸ್ ಕರ್ನಾಟಕ ಅನ್ನೋದು ತೋರಿಸಿಕೊಟ್ಟಿದೆ. ಇದರಿಂದಾಗಿ ದಿನ ದಿಂದ ದಿನಕ್ಕೆ ರಾಜ್ಯದಲ್ಲಿ ಬಿಜೆಪಿ ಕುಸಿಯುತ್ತಿದೆ. ಕಾಂಗ್ರೆಸ್ ಬಲಿಷ್ಠವಾಗುತ್ತಿದೆ. ಇದರಿಂದ ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸಿಟು ಗೆಲ್ಲುತ್ತದೆ ಎಂದು ಚಾಟಿ ಬೀಸಿದರು.

ಇದನ್ನೂ ಓದಿ : ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಲು ಸಿದ್ದರಾಮಯ್ಯ ಹಿಂದೇಟು

ಏಕರೂಪ ಕಾನೂನು ಚುನಾವಣೆ ಗಿಮಿಕ್

ಏಕರೂಪ ನಾಗರಿಕ ಕಾನೂನು ವಿಚಾರವಾಗಿ ಮಾತನಾಡಿ, ಏಕರೂಪ ನಾಗರಿಕ ಕಾನೂನು ಚುನಾವಣೆ ಗಿಮಿಕ್. ಮೋದಿ ಸರ್ಕಾರ ತನ್ನ ಮೊದಲ ಪ್ರಣಾಳಿಕೆಯಲ್ಲಿಯೇ ಘೋಷಣೆ ಮಾಡಿತ್ತು. ಆದರೆ, 9 ವರ್ಷ ಜಾರಿ ಮಾಡದೆ ಈ ಚುನಾವಣೆಯ ಸಮಯದಲ್ಲಿ ಜಾರಿ ಮಾಡುತ್ತಾರೆ ಅಂದರೆ ಏನು ಅರ್ಥ? ಯಾವುದೇ ಚರ್ಚೆ ಆಗದ ತರಾತುರಿಯಲ್ಲಿ ಕಾನೂನು ಜಾರಿ ಮಾಡುತ್ತಿರುವುದು ಚುನಾವಣೆ ಉದ್ದೇಶದಿಂದ ಬಿಟ್ಟು ಬೇರೆನು ಅಲ್ಲ. ಚುನಾವಣೆ ಕೇವಲ ಏಂಟು ತಿಂಗಳು ಇರುವಾಗ ಈ ಕಾನೂನು ತರುತ್ತಿರುವುದು ಗೊಂದಲ ನಿರ್ಮಾಣ ಮಾಡಿದೆ ಎಂದು ಛೇಡಿಸಿದರು.

RELATED ARTICLES

Related Articles

TRENDING ARTICLES