Thursday, January 9, 2025

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್

ಉತ್ತರ ಕನ್ನಡ : ಯಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಹಿನ್ನೇಲೆ ಪ್ರಯಾಣಿಸುತ್ತಿದ್ದ 25 ಮಂದಿಗೆ ಗಂಭೀರ ಗಾಯ.

ಬೆಂಗಳೂರಿನಿಂದ ಗೋವಾಗೆ ಹೊರಟ್ಟಿದ್ದ ಖಾಸಗಿ ಬಸ್ ಒಂದು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಹುಬ್ಬಳ್ಳಿ ರಸ್ತೆಯಲ್ಲಿ ಹೋಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೋಡೆದಿರುವ ಘಟನೆ ನೆಡೆದಿದೆ.

ಸ್ಥಳದಲ್ಲಿಯೇ ಸಾವನ್ನಪ್ಪಿದ ಬಸ್ ಚಾಲಕ

ಪಲ್ಟಿಯಾದ ಹಿನ್ನೇಲೆ ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಪ್ರಯಾಣಿಕರಲ್ಲಿ 25 ಮಂದಿ ಗಂಭೀರ ಗಾಯಗೊಂಡಿದ್ದಾರೆ, ಆದರೆ ಬಸ್ ಚಾಲಕ ಸ್ಥಳದಲ್ಲಿಯೆ ಮೃತ ಪಟ್ಟಿದ್ದಾರೆ. ಬಳಿಕ ಗಾಯಗೊಂಡ ಪ್ರಯಾಣಿಕರಿಗೆ ಹುಬ್ಬಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಯಿತು, ಯಲ್ಲಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES