Monday, December 23, 2024

ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆ ನೇಣಿಗೆ ಶರಣು

ಹಾಸನ : ಮದುವೆಯಾದ ಎರಡೇ ತಿಂಗಳಲ್ಲಿ ಕೌಟುಂಬಿಕ ಕಲಹ ಹಿನ್ನಲೆ ನವವಿವಾಹಿತೆ ನೇಣಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಂದಿತಾ (23) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಎರಡು ತಿಂಗಳ ಹಿಂದೆಯಷ್ಟೇ ನಂದಿತಾ ಮದುವೆಯಾಗಿತ್ತು. ಇಂದು ತನ್ನ ತಾಯಿ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನು ಓದಿ : ಸಿಎಂ ಆಯ್ಕೆ ಮಾಡೋದು ಸೋನಿಯಾ, ರಾಹುಲ್ ಅವ್ರು : ಜಮೀರ್ ಅಹ್ಮದ್

ಸಕಲೇಶಪುರ ತಾಲ್ಲೂಕಿನ ಬೆಳಗೋಡು ಹೋಬಳಿ ಕೂಡನಹಳ್ಳಿ ಗ್ರಾಮದ ಸೋಮಶೇಖರ್ ಜೊತೆ ನಂದಿತಾ ವಿವಾಹವಾಗಿತ್ತು. ಮನೆಯಲ್ಲಿ ಗಲಾಟೆಯಾಗಿ ವಾರದ ಹಿಂದೆ ನಂದಿತಾ ತವರು ಮನೆಗೆ ಬಂದಿದ್ದಳು. ಇದರಿಂದ ಮನನೊಂದು ಸಾವಿಗೆ ಕೊರಳೊಡ್ಡಿದ್ದಾಳೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ನಂದಿತಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES