ಬಾಗಲಕೋಟೆ : ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ಪಡೆದ ಆರೋಪದ ಹಿನ್ನೆಲೆ ಗ್ರಾಮ ಒನ್ ಸಿಬ್ಬಂದಿ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಮಡಿದ್ದಾರೆ.
ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಹೆಸರು ಘೋಷಣೆ ಸಾಧ್ಯತೆ!?
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಶೂರ್ಪಾಲಿ ಗ್ರಾಮದಲ್ಲಿರುವ ನೋಂದಣಿ ಕೇಂದ್ರದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಸಾರ್ವಜನಿಕರಿಂದ ಕೇಳಿ ಬಂದಿತ್ತು, ಕೂಡಲೇ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮಕೂಗೊಳ್ಳಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.
ಈ ಕುರಿತು ಅವರ ಸಾಮಾಜಿಕ ಜಾಲತಾಣದ ಫೇಸ್ಬುಕ್ ನಲ್ಲಿ ಬರೆದುಕೊಂಡಿರುವ ಅವರು, ಗ್ರಾಮ ಒನ್ ಸಿಬ್ಬಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.
ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮವನ್ನು ಸರಕಾರ ಸಹಿಸುವುದಿಲ್ಲ. ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಕ್ಕೂ ಹಿಂಜರಿಯುವುದಿಲ್ಲ ಎಂದು ಅಕ್ರಮ ಎಸಗಲು ಪ್ರಯತ್ನಿಸುತ್ತಿರುವವರಿಗೆ ಎಚ್ಚರಿಕೆ ನೀಡಿದ್ದಾರೆ.