Monday, December 23, 2024

ಸೌಜನ್ಯ ಪ್ರಕರಣ ಮರು ತನಿಖೆಗೆ ಶಾಸಕ ಪೂಂಜ ಸಿಎಂಗೆ ಮನವಿ

ಬೆಳ್ತಂಗಡಿ: ತಾಲ್ಲೂಕಿನ ಉಜಿರೆ ಕಾಲೇಜಿನ ವಿದ್ಯಾ ರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಲೇಡೀಸ್ ಟಾಯ್ಲೆಟ್ನಲ್ಲಿ ಮೊಬೈಲಿಟ್ಟು ಚಿತ್ರೀಕರಿಸಿದ ವಿದ್ಯಾರ್ಥಿನಿಯರು!

ಬೆಂಗಳೂರಿನಲ್ಲಿ ಮುಖ್ಯ ಮಂತ್ರಿಯವರನ್ನು ಭೇಟಿಯಾಗಿ ಈ ಮನವಿಯನ್ನು ಸಲ್ಲಿಸಿರುವ ಶಾಸಕರು, 2012 ಅಕ್ಟೋಬರ್ 9ರಂದು ಕುಮಾರಿ ಸೌಜನ್ಯ, ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಹಲವಾರು ಇಲಾಖೆಗಳಿಂದ ತನಿಖೆ ನಡೆದು ನಂತರ ತಮ್ಮ ನೇತೃತ್ವದ ಘನ ಸರ್ಕಾರ 2013ರಲ್ಲಿ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿತ್ತು. ಅಲ್ಲಿಂದ 2023 ರವರೆಗೂ ನಡೆದ ಸಿಬಿಐ ತನಿಖೆಯಲ್ಲಿ ಶಂಕಿತ ಆರೋಪಿಯನ್ನು ದೋಷಮುಕ್ತಗೊಳಿಸಲಾಗಿದೆ.

ಈ ತನಿಖೆಯ ಫಲಶ್ರುತಿ ಬಗ್ಗೆ ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನೊಳಗೆ ತಂದು ಶಿಕ್ಷೆ ನೀಡಲು ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂಬ ದುಗುಡ ಬೆಳ್ತಂಗಡಿ ತಾಲೂಕಿನ ನಾಗರಿಕರದ್ದಾಗಿದೆ. ಆದ್ದರಿಂದ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ ಕುಟುಂಬಕ್ಕೆ ನ್ಯಾಯ ದೊರಕಿಸುವಂತೆ ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES