Wednesday, January 22, 2025

ಸರ್ಕಾರ ಬೀಳಿಸುವುದರಲ್ಲಿ ಬಿಜೆಪಿಯವ್ರು ಪರಿಣಿತರು : ಕೃಷ್ಣಬೈರೇಗೌಡ

ಬೆಂಗಳೂರು : ಸರ್ಕಾರ ಬೀಳಿಸುವುದರಲ್ಲಿ ಬಿಜೆಪಿಯವರು ಪರಿಣಿತರು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಚಾಟಿ ಬೀಸಿದ್ದಾರೆ.

ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ ಎಂದಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಬಿಜೆಪಿಯವರು ದೇಶಾದ್ಯಂತ ಜನರಿಂದ ಆಯ್ಕೆ ಆದ ಸರ್ಕಾರ ಉರುಳಿಸುವುದರಲ್ಲಿ ಪರಿಣಿತರು. ಬೇರೆ ಬೇರೆ ರಾಜ್ಯದಲ್ಲಿ ಅನೇಕ ಸರ್ಕಾರ ಪತನಗೊಳಿಸಿದ್ದಾರೆ. ಹಾಗಾಗಿ ನಾವು ಎಚ್ಚರಿಕೆಯಿಂದ ಇರಬೇಕು ಎಂದು ಕೃಷ್ಣಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ : ಡಿ.ಕೆ ಶಿವಕುಮಾರ್

ಸರ್ಕಾರ ಉಳಿಸುವ ಪ್ರಯತ್ನ ಮಾಡ್ಬೇಕು

ಅಧಿಕಾರಕ್ಕಾಗಿ ಬಿಜೆಪಿಯವರು ಏನು ಮಾಡುವುದಕ್ಕೂ ಹೇಸುವುದಿಲ್ಲ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕಾಗುತ್ತದೆ. ಡಿ.ಕೆ ಶಿವಕುಮಾರ್ ಅವರಿಗೆ ಮಾಹಿತಿ ಇರಬಹುದ. ಹಾಗಾಗಿ ಮಾತನಾಡಿದ್ದಾರೆ. ಹಿಂದಿನ ಸಚಿವರು ಅಥವಾ ಮುಖ್ಯಮಂತ್ರಿ ಒಂದು ಹೇಳಿಕೆ ಕೊಟ್ಟಿದ್ದನ್ನು ಗಮನಿಸಿದ್ದೇನೆ. ಹೀಗಾಗಿ, ಸರ್ಕಾರ ಉಳಿಸುವ ಪ್ರಯತ್ನ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES