ಬೆಂಗಳೂರು : ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಅಂತ, ಈಗ ಸಿಂಗಾಪುರದಲ್ಲಿ ಕೂತು ಆಪರೇಷನ್ ಮಾಡ್ತಿದ್ದಾರೆ ಎಂದು ಕುಟುಕಿದ್ದಾರೆ.
ವಿದೇಶದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಮಾಡುವುದು ಬಿಟ್ಟು ಹೊರಗೆ ತಂತ್ರ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಇದನ್ನೂ ಓದಿ : ‘ಕೈ’ ಪಾಳೆಯದಲ್ಲಿ ಶುರುವಾಯ್ತು ಮೂಲ V/s ವಲಸಿಗ ಫೈಟ್
ಜು.31ರಂದು ರೈತರ ಜೊತೆ ಸಭೆ
ನಾನೀಗ ಫೆರಿಫೆರಲ್ ರಸ್ತೆಗೆ ಸಂಬಂಧಿಸಿದಂತೆ ರೈತರ ಜೊತೆ ಚರ್ಚೆ ಮಾಡಿದ್ದೇನೆ. ಅವರ ಸಮಸ್ಯೆ ಹೇಳಿಕೊಂಡಿದ್ದಾರೆ. ಹಾಗಾಗಿ, ಜು.31ರಂದು ರೈತರ ಜೊತೆ ಸಭೆ ಮಾಡಲಿದ್ದೇನೆ. ಈಗಾಗಲೇ ಸಿಎಂ ಭೇಟಿ ಮಾಡುವ ಪ್ರಯತ್ನ ಕೂಡ ಮಾಡಿದ್ದಾರೆ. ಸಮಸ್ಯೆ ಬಗ್ಗೆ ಜು.31ರಂದೇ ಚರ್ಚೆ ಮಾಡಲಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಶಾಸಕ ಮುನಿರತ್ನ ಹನಿಟ್ರ್ಯಾಪ್ ವಿಚಾರವಾಗಿ ಮಾತನಾಡಿ, ಮುನಿರತ್ನ ಹನಿಟ್ರ್ಯಾಪ್ ಮಾಡಿಸಿದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಯಾರು ಹೇಳಿದ್ದಾರೋ ಅವರನ್ನೇ ಕೇಳಿ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.