Sunday, January 19, 2025

ಜಲಾವೃತಗೊಂಡ ರಸ್ತೆ : ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳ ಆಗ್ರಹ

ಮಂಗಳೂರು : ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದೆ.

ಪದವಿ ವಿದ್ಯಾರ್ಥಿಗಳು ಅಪಾಯ ಲೆಕ್ಕಿಸದೇ ಪ್ರವಾಹದ ನೀರನ್ನು ದಾಟಿಕೊಂಡು ಬಂದು ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಸೋಮವಾರ ಉಂಟಾಯಿತು.

ಮಂಗಳೂರು ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆ ಸೋಮವಾರ ನಿಗದಿಯಾಗಿತ್ತು. ಭಾರಿ ಮಳೆಯ ಮುನ್ಸೂಚನೆ ಇದ್ದರೂ ವಿಶ್ವವಿದ್ಯಾಲಯವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರೀಕ್ಷೆ ಮುಂದೂಡಿರಲಿಲ್ಲ. ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆ.ಎಸ್.ಎಸ್ (KSS) ಕಾಲೇಜಿಗೆ ಪರೀಕ್ಷೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳು ಬಂದರು.

ಇದನ್ನೂ ಓದಿ : ಹಾವೇರಿ ಜಿಲ್ಲೆಯಾದ್ಯಂತ ವರುಣನ ಅರ್ಭಟ, ಮುಳುಗಡೆಯಾದ ವರದ ಸೇತುವೆ

ಪರೀಕ್ಷೆ ಮುಂದೂಡುವಂತೆ ಆಗ್ರಹ

ಭಾರಿ ಮಳೆಯಾಗುವ ಸಂದರ್ಭ ಮಂಗಳೂರು ವಿಶ್ವವಿದ್ಯಾನಿಲಯ ಸೆಮಿಸ್ಟರ್ ಪರೀಕ್ಷೆ ಮುಂದೂಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಸೋಮವಾರ ಬೆಳಗ್ಗೆ ಹಾಗೂ ಮಧ್ಯಾಹ್ನ ಪರೀಕ್ಷೆಗಳು ನಿಗದಿಯಾಗಿದ್ದವು. ಮಂಗಳೂರು ವಿಶ್ವವಿದ್ಯಾಲಯವು ಕೊಡಗು ಜಿಲ್ಲೆಯಲ್ಲಿ ಸೆಮಿಸ್ಟರ್ ಪರೀಕ್ಷೆ ಮುಂದೂಡಿದೆ.

ಶರಾವತಿ ಉಕ್ಕಿ ಹರಿಯುತ್ತಿರುವ ಶರಾವತಿ

ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ ತಾಲೂಕುಗಳು ಸೇರಿದಂತೆ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿರುವುದರಿಂದ ಕರಾವಳಿಯ ಪ್ರಮುಖ ನದಿಗಳಾದ ಕಾಳಿ, ಗಂಗಾವಳಿ, ಅಘನಾಶಿನಿ, ಶರಾವತಿ ಉಕ್ಕಿ ಹರಿಯುತ್ತಿದೆ. ಅದರಲ್ಲೂ ಸಿದ್ದಾಪುರ ತಾಲೂಕಿನ ಹಲವು ಭಾಗದಲ್ಲಿ ಮಳೆ ವ್ಯಾಪಕವಾಗಿ ಆಗಿರುವುದರಿಂದ ಹೊನ್ನಾವರ ತಾಲ್ಲೂಕಿನ ಜನಕಡಕಲ್ ಗ್ರಾಮದ ಮುಕ್ತಿ ಹೊಳೆ ಉಕ್ಕಿ ಹರಿಯುತ್ತಿದೆ. ಈ ನದಿ ಮುಂದೆ ಗುಂಡಬಾಳ, ಹಡಿನಬಾಳ, ನಾತಗೇರಿ, ಕಾವೂರು, ಬೆರೊಳ್ಳಿ ಮೂಲಕ ಹರಿದು ಶರಾವತಿ ನದಿ ಸೇರುತ್ತದೆ.

ಹೀಗಾಗಿ ಗುಂಡಬಾಳ ಮತ್ತು ಕೋಟೆಬೈಲ್ ಗೆ ಹೋಗುವ ಮಾರ್ಗ ಬಂದ್ ಆಗಿದೆ. ಅಲ್ಲದೇ ಚಿಕ್ಕನಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಬೈಲ್, ಗುಂಡಬಾಳ ದೇವಸ್ಥಾನ ಕೇರಿ, ಮುಟ್ಟಾ, ಹಾಡಗೇರಿ, ಚಿಕ್ಕನಕೋಡ, ಗುಂಡಿಬೈಲ್, ಕಡಗೇರಿ ಮನೆಗಳಿಗೆ ನೀರು ನುಗ್ಗಿದೆ. ಮಳೆ ಹೀಗೆ ಮುಂದುವರಿದರೆ ಇನ್ನಷ್ಟು ಗ್ರಾಮಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಲಿದೆ. ಜಿಲ್ಲೆ ಅನೇಕ ಗ್ರಾಮದಲ್ಲಿ ಈಗಾಗಲೆ ಕಾಳಜಿ ಕೇಂದ್ರವನ್ನು ತೆರೆಯಲಾಗಿದ್ದು, ಮಳೆಯಿಂದ ತೊಂದರೆಗೊಳಗಾದವರಿಗೆ ಕಾಳಜಿ ಕೇಂದ್ರದಲ್ಲಿ ಆಶ್ರಯ ಕೊಡಲಾಗಿದೆ.‌

RELATED ARTICLES

Related Articles

TRENDING ARTICLES