Thursday, January 23, 2025

ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ರೈತ ಸಾವು

ಬೆಳಗಾವಿ : ಭತ್ತದ ಗದ್ದೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕ್ರಿಶ್ಚಿಯನ್ ವಾಡಾ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪಾಂಡುರಂಗ ಲಾಡಗೌವಕರ್ (61) ಸಾವನ್ನಪ್ಪಿದ ರೈತ. ಜಮೀನಿನಲ್ಲಿ ‌ಕೃಷಿ ಕಾರ್ಯದಲ್ಲಿ ತೊಡಗಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿದೆ.

ರೈತ ಪಾಂಡುರಂಗ ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದರು. ಭತ್ತ ನಾಟಿ ಮಾಡುವ ಸಲುವಾಗಿ ಉಳುಮೆ ಮಾಡುತ್ತಿದ್ದರು. ಗದ್ದೆಯಲ್ಲಿ ನೀರು ಸಂಗ್ರಹವಾಗಿತ್ತು. ಈ ವೇಳೆ ಟ್ರ್ಯಾಕ್ಟರ್ ಗದ್ದೆಯಲ್ಲಿ ತಗ್ಗಿಗೆ ಸಿಲುಕಿಕೊಂಡು, ಹಿಂದಕೆ ಬಿದ್ದಿದೆ. ಈ ವೇಳೆ ಟ್ರ್ಯಾಕ್ಟರ್ ಕೆಳಗಡೆ ಸಿಲುಕಿ ರೈತ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಖಾನಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಅಬ್ಬಾ..! : ಚಿರತೆ ದಾಳಿಯಿಂದ ಪಾರಾದ ರೈತ

5 ಲಕ್ಷ ರೂ ಪರಿಹಾರ

ದಾವಣಗೆರೆ ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆ ಗೋಡೆ ಕುಸಿದು ಹೆಣ್ಣು ಮಗು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ 5 ಲಕ್ಷ ರೂ. ಪರಿಹಾರ ವಿತರಿಸಿದರು. ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಮುಂಜಾನೆ ಮನೆಯ ಗೋಡೆ ಕುಸಿತಗೊಂಡಿತ್ತು. ಈ ವೇಳೆ ಒಂದು ಐದು ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ್ದಳು.

RELATED ARTICLES

Related Articles

TRENDING ARTICLES