Friday, November 22, 2024

‘ಲೋಕಾ’ ಬಲೆಗೆ ‘ಲಂಚಬಾಕ’ : ಅಧಿಕಾರಿಗಳಿಗೆ ಬೆದರಿ 5 ಸಾವಿರ ನುಂಗಿದ ಭೂಪ!

ಬೆಂಗಳೂರು : ಆದಾಯ ಇಲಾಖೆಯ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಈ ವೇಳೆ ಅವರು ಲಂಚವಾಗಿ ಸ್ವೀಕರಿಸಿದ 5,000 ರೂ. ಹಣವನ್ನು ಜಗಿದು ನುಂಗಿದ್ದಾನೆ.

ಮಧ್ಯಪ್ರದೇಶದಲ್ಲಿ ಕಟ್ನಿ ಜಿಲ್ಲೆಯಲ್ಲಿ  ಈ ಪ್ರಸಂಗ ನಡೆದಿದೆ. ಕಟ್ನಿ ಜಿಲ್ಲೆಯಲ್ಲಿ ನಿಯೋಜಿಸಲಾಗಿದ್ದ ಕಂದಾಯ ಇಲಾಖೆಯ ಅಧಿಕಾರಿ ಗಜೇಂದ್ರ ಸಿಂಗ್ ಲಂಚದ ಹಣವನ್ನು ಜಗಿದು ನುಂಗಿರುವ ವ್ಯಕ್ತಿ.

ಇದನ್ನೂ ಓದಿ : 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್

5,000 ರೂ. ಲಂಚಕ್ಕೆ ಬೇಡಿಕೆ

ಭೂ ಪ್ರಕರಣದ ದೂರುದಾರರಾದ ಚಂದನ್ ಸಿಂಗ್ ಲೋಧಿ ಅವರಿಗೆ ಗಜೇಂದ್ರ ಸಿಂಗ್ 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ, ಲೋಧಿ ಲೋಕಾಯುಕ್ತ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದ ಜಬಲ್ಪುರದ ಲೋಕಾಯುಕ್ತ ಪೊಲೀಸರ ತಂಡ ಗಜೇಂದ್ರ ಸಿಂಗ್ ಖಾಸಗಿ ಕಚೇರಿಗೆ ತಲುಪಿತ್ತು.

5 ಸಾವಿರ ಜಗಿದು ನುಂಗಿದ ಭೂಪ

ಗಜೇಂದ್ರ ಸಿಂಗ್ ಲೋಧಿ ಅವರಿಂದ ಲಂಚವನ್ನು ಸ್ವೀಕರಿಸುತ್ತಿರುವಾಗಲೇ ದಾಳಿ ನಡೆಸಿ ಕಂದಾಯ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಆದರೆ, ಈ ವೇಳೆ ಗಜೇಂದ್ರ ಸಿಂಗ್ ಅವರಿಂದ ತಾನು ಸ್ವೀಕರಿಸಿದ 5,000 ರೂ. ಮೊತ್ತದ ಲಂಚವನ್ನು ಜಗಿದು ನುಂಗಿದ್ದಾರೆ.

RELATED ARTICLES

Related Articles

TRENDING ARTICLES