Friday, May 17, 2024

‘ಹಿಂದೂಗಳೇ ಎಚ್ಚರ’ ಅನ್ನೋ ಫಲಕ ಹಾಕಬೇಕಾ? : ಅಶ್ವತ್ಥನಾರಾಯಣ

ಬೆಂಗಳೂರು : ಉಡುಪಿಯಲ್ಲಿ ಹಿಂದೂ ವಿದ್ಯಾರ್ಥಿನಿಯೋರ್ವಳ ಖಾಸಗಿ ದೃಶ್ಯವನ್ನು ಸೆರೆಹಿಡಿದು ಹರಿಬಿಟ್ಟಿರುವ ಪ್ರಕರಣದ ಬಗ್ಗೆ ಮಾಜಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಇದು ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದ ಪರಮಾವಧಿ. ಇದರ ಫಲವಾಗಿ ‘ಹಿಂದೂಗಳೇ ಎಚ್ಚರ’ ಎಂಬ ಫಲಕ ಹಾಕಬೇಕಾದ ಪರಿಸ್ಥಿತಿ ಬಂದಿದೆ ಎಂದು ಕುಟುಕಿದ್ದಾರೆ.

ಉಡುಪಿಯಲ್ಲಿ ಹಿಂದೂ ವಿದ್ಯಾರ್ಥಿನಿಯೋರ್ವಳ ಖಾಸಗಿ ದೃಶ್ಯವನ್ನು ಸೆರೆಹಿಡಿದು ಮುಸ್ಲಿಂ ಯುವಕರಿಗೆ ಹಂಚಿರುವುದು ಪೂರ್ವ ಯೋಜಿತ ಕೃತ್ಯ ಎನ್ನುವುದರಲ್ಲಿ ಅನುಮಾನವಿಲ್ಲ. ಈ ಘಟನೆಯ ಬಗ್ಗೆ ಧ್ವನಿಯೆತ್ತಿದ ರಶ್ಮಿ ಅವರ ಬಾಯಿ ಮುಚ್ಚಿಸಲು ರಾತ್ರೋ ರಾತ್ರಿ ಪೊಲೀಸರನ್ನು ಕಳುಹಿಸಿರುವ ಕಾಂಗ್ರೆಸ್‌ ಸರ್ಕಾರ ಈ ಘಟನೆಯನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ಹಿಂದೂ ಹುಡುಗಿಯರ ನಗ್ನ ಶರೀರ ನೋಡಬಹುದಾ? : ರವಿಕುಮಾರ್ ಕಿಡಿ

ಹೆಣ್ಣುಮಕ್ಕಳ ಮೇಲೆ ಪ್ರಯೋಗಿಸಬೇಡಿ

ಸರ್ಕಾರದ ಹಿಂದೂ ವಿರೋಧಿ ನೀತಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಈ ರೀತಿಯ ದರ್ಪದ ಆಡಳಿತ ನಡೆಸುವುದು ಕ್ಷಮಾರ್ಹವಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ನಮ್ಮ ಮನೆಯ ಅಮಾಯಕ ಹೆಣ್ಣುಮಕ್ಕಳ ಮೇಲೆ ಪ್ರಯೋಗಿಸಬೇಡಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಓಲೈಕೆ ರಾಜಕಾರಣವನ್ನು ಬದಿಗಿಟ್ಟು, ಪೊಲೀಸ್‌ ಇಲಾಖೆಗೆ ಈ ಘಟನೆಯ ಬಗ್ಗೆ ಮುಕ್ತ ತನಿಖೆಗೆ ಅವಕಾಶ ನೀಡಬೇಕು. ಜಿಹಾದಿ ಮನಸ್ಥಿತಿಯನ್ನು ಮಟ್ಟ ಹಾಕಲು ಸಹಕರಿಸಿ ಎಂದು ಅಶ್ವತ್ಥನಾರಾಯಣ ಅವರು ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES