Sunday, December 22, 2024

ರಾಜ್ಯದಲ್ಲಿ ಶೇ 100 ರಷ್ಟು ಬಿತ್ತನೆಯಾಗುವ ನಿರೀಕ್ಷೆ: ಸಿಎಂ

ಬೆಂಗಳೂರು:  ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: ಬುರ್ಕಾ ಧರಿಸಿದೇ ಬಂದ ವಿದ್ಯಾರ್ಥಿನಿಯರನ್ನು ಬಸ್​ ನಿಂದ ಕೆಳಗಿಳಿಸಿದ ಬಸ್ ಚಾಲಕ!

ನಗರದಲ್ಲಿ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಳೆಯಿಂದಾಗಿ ಕೈ ಮೀರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಕೆ.ಆರ್.ಎಸ್ , ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ಸೇರಿದಂತೆ ಎಲ್ಲಾ ಜಲಾಶಯಗಳಿಗೆ ನೀರು ಬರುತ್ತಿರುವುದು ರೈತರಿಗೆ ಹಾಗೂ ಸರ್ಕಾರಕ್ಕೆ ಸಂತೋಷ ತಂದಿದೆ.  ಹಾವೇರಿಯಲ್ಲಿ 87% ಬಿತ್ತನೆಯಾಗಿದೆ ಎಂದರು.

ಜುಲೈ 31 ಕ್ಕೆ ವಿವಿಧ ಜಿಲ್ಲೆಗಳ ಪ್ರವಾಸ, ಪರಿಶೀಲನೆ: ಸೋಮವಾರ ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಯಿಂದ  ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು ಎಂದರು. ಈಗಾಗಲೇ ಸಚಿವ ಕೃಷ್ಣ ಬೈರೇಗೌಡರು ನಿನ್ನೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದರು.

ಇದನ್ನೂ ಓದಿ: ಜೆಸಿಬಿ ಬಳಸಿ ಎಟಿಎಂ ಯಂತ್ರ ಕಳವಿಗೆ ಯತ್ನ!

ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ: ಎಲ್ಲೆಡೆ ಮಳೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಮಳೆಯಾಗುವ ಮೊದಲು ಟ್ಯಾಂಕರ್ ನೀರಿನ ಸರಬರಾಜು ಮಾಡಲಾಗುತ್ತಿತ್ತು. ಆದರೆ, ಈಗ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ ಎಂದು ಅವರು ಹೇಳಿದರು.

ಅಮಾಯಕ ಮೇಲಿನ ಕೇಸ್ ವಾಪಸ್: ಇದೇ ವೇಳೆ ಡಿ.ಜೆ.ಹಳ್ಳಿ ಹಾಗೂ ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಅಮಾಯಕರ ಮೇಲಿನ ಕೇಸ್  ಹಿಂಪಡೆಯುವ ಬಗ್ಗೆ  ಪ್ರತಿಕ್ರಿಯೆ ನೀಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಏಕೆ ಹಿಂಪಡೆಯಲಿಲ್ಲ ಎಂದರು.

ಶಾಸಕರ ಹೆಸರಿನಲ್ಲಿ ನಕಲಿ ಪತ್ರ: ಶಾಸಕರು ಸಚಿವರ ಮೇಲೆ ದೂರು ನೀಡಿ ಮುಖ್ಯ ಮಂತ್ರಿಗಳಿಗೆ ಬರೆದಿದ್ದಾಈ ಎನ್ನಲಾದ ಪತ್ರವನ್ನು  ಶಾಸಕ ಬಿ.ಆರ್.ಪಾಟೀಲ್ ಅವರೇ  ನಕಲಿ ಪತ್ರ ಎಂದು ಹೇಳಿದ್ದಾರೆ. ಆದರೂ ಪತ್ರಿಕೆಗಳಲ್ಲಿ ಪ್ರಚಾರ ಮಾಡಲಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಬರೆದಿದ್ದಾರೆ. ಇಂಥ ಮಂತ್ರಿ ಎಂದು ಹೆಸರಿಸಿಲ್ಲ ಎಂದರು.

ಕಾರ್ಗಿಲ್ ಯೋಧರ ಬದುಕು ಯುವಕರಿಗೆ ಸ್ಫೂರ್ತಿ: ಕಾರ್ಗಿಲ್ ಯುದ್ಧದಲ್ಲಿ ಸುಮಾರು 524 ಯೋಧರು ದುರ್ಗಮ ಸ್ಥಳದಲ್ಲಿ ಹೋರಾಡಿ ದೇಶವನ್ನು ರಕ್ಷಣೆ  ಮಾಡುವ ಕೆಲಸ ಮಾಡಿದ್ದಾರೆ.  ತ್ಯಾಗ, ಬಲಿದಾನ ಮಾಡಿದ ಎಲ್ಲರ ಆತ್ಮಕ್ಕೆ  ಶಾಂತಿ ಕೋರಿ ಸ್ಮರಿಸುವುದು  ನಮ್ಮ ಕರ್ತವ್ಯ. ಅವರ ಜೀವನ ಇಂದಿನ ಯುವಕರಿಗೆ ಸ್ಫೂರ್ತಿ ಹಾಗೂ ಮಾರ್ಗದರ್ಶನ  ನೀಡುವಂಥದ್ದು ಎಂದರು.

RELATED ARTICLES

Related Articles

TRENDING ARTICLES