Wednesday, January 22, 2025

ಸಾಲ ಮನ್ನಾ ಪ್ರಸ್ತಾಪ ಇಲ್ಲ, ಗ್ಯಾರಂಟಿಗೇ ಮೊದಲ ಆದ್ಯತೆ : ಸಚಿವ ರಾಜಣ್ಣ

ಕಲಬುರಗಿ : ರಾಜ್ಯದಲ್ಲಿ ಸಾಲ ಮನ್ನಾ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎನ್ನುವ ಮೂಲಕ ಸಹಕಾರಿ ಸಚಿವ ಕೆ.ಎನ್ ರಾಜಣ್ಣ ರೈತರ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ.

ಕಲಬುರಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ 5 ಉಚಿತ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದು ಮಾತ್ರ ಕಾಂಗ್ರೆಸ್ ಸರ್ಕಾರದ ಮುಂದಿರುವ ಮೊದಲು ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಐದು ಲಕ್ಷದವರಗೆ ಶೂನ್ಯ(0%) ಬಡಿದರದಲ್ಲಿ ಕೃಷಿ ಸಾಲ ನೀಡಲಾಗುತ್ತಿದೆ. ಗ್ರಾಮ ಪಂಚಾಯತಿಗೆ ಒಂದರಂತೆ ಸಹಕಾರ ಸಂಘ ರಚನೆ ಮಾಡಲಾಗುವುದು. ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿಗಳಿಗೆ ಸೇವಾ ಭದ್ರತೆ ಇಲ್ಲ. ಅವರಿಗೆ ಸೇವಾ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

3 ರೂಪಾಯಿ ಹಾಲಿನ ದರ ಹೆಚ್ಚಳ ವಿಚಾರ ಕುರಿತು ಮಾತನಾಡಿರುವ ಅವರು, ಗುರುವಾರ ಮಂತ್ರಿಮಂಡಲ ಸಭೆಯಿದೆ. ಕ್ಯಾಬಿನೇಟ್ ನಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೆ.ಎನ್ ರಾಜಣ್ಣ ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES