Saturday, January 18, 2025

ವರುಣಾರ್ಭಟಕ್ಕೆ ಭಾರಿ ಪ್ರಮಾಣ ಭೂಕುಸಿತ, ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಚಿಕ್ಕಮಂಗಳೂರು : ಮಲೆನಾಡಿನಲ್ಲಿ ಮಳೆಯ ಅಬ್ಬರಕ್ಕೆ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ವರ್ಣಧಾರೆಗೆ ಭಾರಿ ಪ್ರಮಾಣದ ಭೂಕುಸಿತವಾಗಿದೆ.

ಜಿಲ್ಲೆಯ ಕೊಪ್ಪ ತಾಲೂಕಿನ ಹೆರೂರು ಗ್ರಾಮದಲ್ಲಿ ಸುಮಾರು‌ 90 ಅಡಿ ಭೂಮಿ ಕುಸಿದಿದೆ. ಸುಮಾರು ಏಳುಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದೆ.

ಇದನ್ನು ಓದಿ : ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ : ಗೃಹಸಚಿವ ಪರಮೇಶ್ವರ್

ಭೂಕುಸಿತದಿಂದ ತಾಲೂಕಿನ ಹೆರೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಶಾಂತಿ ಕೂಡಿಗೆ, ಶುಂಠಿ ಕೂಡಿಗೆ, ಬಿಟ್ಟ ಕೂಡಿಗೆ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ರಸ್ತೆಯಲ್ಲಿ ಮತ್ತಷ್ಟು ಕುಸಿಯುವ ಭೀತಿ ಉಂಟಾಗಿದೆ. ಮಳೆ ಹೆಚ್ಚಾದಂತೆ ಸ್ವಲ್ಪ ಸ್ವಲ್ಪವೇ ಭೂಮಿ ಜರಿತವಾಗುತ್ತಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಸರ್ಕಾರಿ ಬಸ್ ಸಂಚರಿಸುತ್ತಿದ್ದ ವೇಳೆ ರಸ್ತೆಗೆ ಮರ ಅಡ್ಡಲಾಗಿ ಬಿದ್ದಿದ್ದೆದು, ಕ್ಷಣಾರ್ಧದಲ್ಲಿ ಭಾರೀ ಅನಾಹುತ ತಪ್ಪಿದೆ. ಮೂಡಿಗೆರೆ ಸಮೀಪದ ಹಾಂದಿ ಗ್ರಾಮದ ಬಳಿ ಘಟನೆ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ಕೆಎಸ್​ಆರ್​ಟಿಸಿ ಬಸ್ ತೆರಳುತ್ತಿದ್ದ ವೇಳೆ ಗಾಳಿ ಮಳೆಗೆ ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಪರಿಣಾಮ ಚಿಕ್ಕಮಗಳೂರು-ಮಂಗಳೂರು ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

RELATED ARTICLES

Related Articles

TRENDING ARTICLES