Friday, November 22, 2024

ಶೌಚಾಲಯದಲ್ಲಿ ಯಾವ ಹಿಡನ್ ಕ್ಯಾಮೆರಾ ಇರಲಿಲ್ಲ : ಖುಷ್ಬೂ ಸುಂದರ್

ಉಡುಪಿ : ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​​ ಸಿಕ್ಕಿದೆ. ಮೊದಲು ಹಿಡನ್​​ ಕ್ಯಾಮರಾದಲ್ಲಿ ವಿಡಿಯೋ ಚೀತ್ರೀಕರಣ ಮಾಡಲಾಗಿದೆ ಎಂದು ಹೇಳಲಾಗಿತ್ತು. ಆದರೆ, ಇದೀಗ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಸ್ಪಷ್ಟನೆ ನೀಡಿದ್ದಾರೆ.

ಉಡುಪಿಗೆ ಭೇಟಿ ನೀಡಿದ ಅವರು ಪ್ರತಿಕ್ರಿಯೆ ನೀಡಿದ್ದು, ವದಂತಿಗಳನ್ನು ಹರಡಬಾರದು. ಕಾಲೇಜಿನ ಶೌಚಾಲಯದಲ್ಲಿ ಯಾವ ಹಿಡನ್ ಕ್ಯಾಮೆರಾ ಇರಲಿಲ್ಲ. ಇದೊಂದು ಶೈಕ್ಷಣಿಕ ಕೇಂದ್ರ ಎಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ. ಈಗಲೇ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಈಗಷ್ಟೇ ತನಿಖೆ ಆರಂಭಿಸಿದ್ದೇವೆ, ಈ ವಿಚಾರದಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬರಬೇಡಿ. ಸಾಕ್ಷ್ಯ ಸಿಕ್ಕಿದೆಯಾ ಎನ್ನೋ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ಮುಸ್ಲಿಂ ಮತಕ್ಕೆ ಅಂಜಿ, ಇವ್ರು ಇಷ್ಟು ಕೆಟ್ಟ ಕೆಲಸ ಮಾಡ್ತಿದ್ದಾರೆ : ಗೋವಿಂದ ಕಾರಜೋಳ

ನಮಗೆ ನಮ್ಮ ಕೆಲಸ ಮಾಡಲು ಬಿಡಿ

ಪೊಲೀಸರ ಹೇಳಿಕೆ ಹೊರತಾಗಿ ಸದ್ಯ ಜನರು ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ. ಮಹಿತಿ ಸಂಗ್ರಹಕ್ಕೆ ನಮಗೆ ಇನ್ನು ಸ್ವಲ್ಪ ಸಮಯಬೇಕು. ಎಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ವರ್ತಿಸಬೇಕೆಂದು ಕೋರುತ್ತೇನೆ. ಯಾವುದೇ ರೂಮರ್ ಗಳಿಗೆ, ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ. ನಾವೇ ಸರಿಯಾದ ಮಾಹಿತಿಯನ್ನು ನೀಡುತ್ತೇವೆ. ಸಂಬಂಧಪಟ್ಟ ಫೋನ್ ಗಳು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ. ಇದಕ್ಕೆ ಹೊರತಾಗಿ ಯಾವುದೇ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ನಮಗೆ ನಮ್ಮ ಕೆಲಸ ಮಾಡಲು ಬಿಡಿ ಎಂದು ಹೇಳಿದ್ದಾರೆ.

ಎರಡು ನಿಮಿಷದ ನೂಡಲ್ಸ್ ಥರ ಅಲ್ಲ

ನಾವು ಯಾರನ್ನು ಮಾತನಾಡಿಸುತ್ತೇವೆ ಎಲ್ಲಿಗೆ ಹೋಗುತ್ತೇವೆ ಎಂದು ಹಿಂಬಾಲಿಸಬೇಡಿ. ಎನ್ ಸಿಡಬ್ಲ್ಯೂ ಪರವಾಗಿ ನಾನು ಸ್ಥಳದಲ್ಲಿ ಇದ್ದೇನೆ. ಎನ್ ಸಿ ಡಬ್ಲ್ಯೂ ಗೆ ದೂರು ಬಂದ ಕಾರಣ ನಾನು ಇಲ್ಲಿ ಇದ್ದೇನೆ. ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ನಾನು ನಿಮಗೆ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಇಲ್ಲ. ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರ. ಇದು ಮಹಿಳೆಯರಿಗೆ ಸಂಬಂಧಿಸಿದ ವಿಚಾರ, ಕಾಯಬೇಕು. ಇದು ಎರಡು ನಿಮಿಷದ ನೂಡಲ್ಸ್ ಥರ ಅಲ್ಲ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES