ಉಡುಪಿ: ಇಲ್ಲಿನ ಕಾಲೇಜೊಂದರ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಣ ವಿವಾದ ಬುಗಿಲೆದ್ದಿದ್ದು, ಎಬಿವಿಪಿ ವತಿಯಿಂದ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಕೃಷ್ಣಾನದಿ ಪಾತ್ರದಲ್ಲಿ ಮೊಸಳೆಗಳು ಪ್ರತ್ಯಕ್ಷ: ನದಿ ಸುತ್ತ ಓಡಾಡದಂತೆ ಜಿಲ್ಲಾಡಳಿತ ಸೂಚನೆ!
ಕಳೆದ ಮೂರು ದಿನಗಳ ಹಿಂದೆ ನಗರದ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಮುಸ್ಲಿಂ ವಿದ್ಯಾರ್ಥಿಗಳು ಖಾಸಗಿ ದೃಶ್ಯ ಚಿತ್ರೀಕರಣ ಮಾಡಿರುವ ಘಟನೆಯ ನಡೆದಿದ್ದು ಈ ಕುರಿತು ಪೊಲೀಸ್ ಇಲಾಖೆ ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆ ಉಡುಪಿಯ ಅಜ್ಜರಕಾಡು ಯುದ್ಧ ಸ್ಮಾರದ ಬಳಿ ಪ್ರೊಟೆಸ್ಟ್ ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಮಳೆ ನಡುವೆಯೇ ಎಬಿವಿಪಿ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಉಡುಪಿ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ಮತ್ತು ನೂಕಾಟ ಘಟನೆಗಳು ನಡೆದಿದೆ.
ಇದೇ ವೇಳೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು, ಉಡುಪಿಯಲ್ಲಿರುವ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ್ದು ಸಂತ್ರಸ್ತ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆಯುತ್ತಿದ್ದಾರೆ. ಇದೇ ವೇಳೆ ಕಾಲೇಜು ಆಡಳಿತ ಮಂಡಳಿಯಿಂದಲೂ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.