Sunday, December 22, 2024

ನೀಚ ಕೃತ್ಯ ಮಾಡಿರುವ ನೀವು ಮನುಷ್ಯರೇ ಅಲ್ಲ : ಬಿಜೆಪಿ ಕಾರ್ಯಕರ್ತರು ಕಿಡಿ

ಶಿವಮೊಗ್ಗ : ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳ ನಗ್ನ ದೃಶ್ಯಗಳನ್ನು ಚಿತ್ರೀಕರಣ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. 

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಅನ್ಯ ಕೋಮಿನ ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫಿಯಾ ಮತ್ತು ಆಲೀಮಾ ಈ ಪ್ರಕರಣವನ್ನು ಅಲ್ಲಿಯೇ ಮುಚ್ಚಿಹಾಕಿ ಅವರನ್ನು ರಕ್ಷಿಸಲು ರಾಜ್ಯಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಕರಣದ ಬಗ್ಗೆ ಧ್ವನಿ ಎತ್ತಿದ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ರಶ್ಮಿ ಸಾವಂತ್ ಅವರ ಮನೆಗೆ ಪೊಲೀಸರನ್ನು ಕಳುಹಿಸಿ ಅವರನ್ನು ಸುಮ್ಮನಿರಿಸಲು ಪ್ರಯತ್ನಿಸಲಾಗಿದೆ. ಆ ಮೂಲಕ ಪ್ರಕರಣಕ್ಕೆ ಜಿಹಾದಿ ನಂಟು ಇರಬಹುದೆಂದು ಅನುಮಾನ ವ್ಯಕ್ತವಾಗುತ್ತಿದೆ. ಈ ಕೃತ್ಯದಿಂದ ಹಿಂದೂ ಯುವತಿಯರು ಶೋಷಣೆಗೊಳಗಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ : ಗೃಹಸಚಿವ ಪರಮೇಶ್ವರ್​ ಪ್ರತಿಕ್ರಿಯೆ!

ನೀಚ ಕೃತ್ಯ ಮಾಡಿರುವ ನೀವು ಮನುಷ್ಯರೇ ಅಲ್ಲ

ದೇಶದಲ್ಲಿ ಮಹಿಳೆಯರಿಗೆ ತಾಯಿತನದ ಗೌರವವಿದ್ದು, ಈ ಮುಸ್ಲಿಂ ವಿದ್ಯಾರ್ಥಿನಿಯರು ಮಾಡಿರುವ ಹೀನಾಯ ಕೃತ್ಯದಿಂದ ಮಹಿಳಾ ಸಂಕುಲವೇ ತಲೆ ತಗ್ಗಿಸುವಂತಾಗಿದೆ. ಕೂಡಲೇ, ಪ್ರಕರಣದಲ್ಲಿ ಭಾಗಿಯಾದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು ಎಂದ ಆಗ್ರಹಿಸಿದ್ದಾರೆ.

ನೀಚ ಕೃತ್ಯ ಮಾಡಿರುವ ನೀವು ಮನುಷ್ಯರೇ ಅಲ್ಲ. ಮತಾಂದ ವಿದ್ಯಾರ್ಥಿನಿಯರನ್ನು ಬಂಧಿಸಬೇಕು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದ ಜಿಲ್ಲಾ ಉಸ್ತುವಾರಿ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಘೋಷಣೆ ಕೂಗಿದ್ದಾರೆ.

RELATED ARTICLES

Related Articles

TRENDING ARTICLES