Wednesday, January 22, 2025

ದ್ವಿತೀಯ PUC 2ನೇ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : 2023ನೇ ಸಾಲಿನ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಈ ಕುರಿತು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಆ.21ರಿಂದ ಸೆಪ್ಟೆಂಬರ್ 2ರವರೆಗೆ 2ನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.

ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮತ್ತು ಕಡಿಮೆ ಅಂಕ ಬಂದು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿರುವ ವಿದ್ಯಾರ್ಥಿಗಳು ಮರು ಪರೀಕ್ಷೆಗೆ ಹಾಜರಾಗುವಂತೆ ಮಂಡಳಿ ತಿಳಿಸಿದೆ.

https://kseab.Karnataka.gov.in ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಪೂರಕ ಪರೀಕ್ಷೆ-2 ವೇಳಾಪಟ್ಟಿ

  • 21-08-2023ರಂದು ಕನ್ನಡ, ಆರೇಬಿಕ್
  • 22-08-2023ರಂದು ಐಚ್ಛಿಕ ಕನ್ನಡ, ಕೆಮಿಸ್ಟ್ರಿ, ಬೇಸಿಕ್ ಮ್ಯಾಥ್ಸ್‌
  • 23-08-2023ರಂದು ಸಮಾಜ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
  • 24-08-2023ರಂದು ಲಾಜಿಕ್, ಹಿಂದೂಸ್ಥಾನಿ ಮ್ಯೂಸಿಕ್, ಬ್ಯುಸಿನೆಸ್ ಸ್ಟಡೀಸ್
  • 25-08-2023ರಂದು ಇತಿಹಾಸ, ಸ್ಯಾಟಿಸ್ಟಿಕ್ಸ್
  • 26-08-2023ರಂದು ಇನ್ನರ್ಮೇಷನ್‌ ಟೆಕ್ನಾಲಜಿ, ರಿಟೇಲ್, ಆಟೋ ಮೊಬೈಲ್, ಹೆಲ್ತ್‌ ಕೇರ್‌
  • 28-08-2023ರಂದು ಜಿಯೋಗ್ರಾಫಿ, ಸೈಕಾಲಜಿ, ಫಿಜಿಕ್ಸ್
  • 29-08-2023ರಂದು ಅಕೌಂಟ್ಸ್, ಜಿಯಾಲಜಿ, ಎಜುಕೇಷನ್, ಹೋಂ ಸೈನ್ಸ್
  • 30-08-2023ರಂದು ಪೊಲಿಟಿಕಲ್ ಸೈನ್ಸ್, ಮ್ಯಾಥಮೆಟಿಕ್ಸ್
  • 31-08-2023ರಂದು ಹಿಂದಿ
  • 01-09-2023ರಂದು ಎಕನಾಮಿಕ್ಸ್, ಬಯಾಲಜಿ
  • 02-09-2023ರಂದು ತಮಿಳ್, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಹಾಗೂ ಫ್ರೆಂಚ್

RELATED ARTICLES

Related Articles

TRENDING ARTICLES