Wednesday, January 22, 2025

ಮಣಿಪುರ ಪ್ರಕರಣ : ಸಿಬಿಐ ತನಿಖೆಗೆ ಕೇಂದ್ರ ಸರ್ಕಾರ ಆದೇಶ

ಬೆಂಗಳೂರು : ಮಣಿಪುರದಲ್ಲಿ ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿಸಿ ಮೆರವಣಿಗೆ ಮಾಡಿ, ಕಿರುಕುಳ ನೀಡಿದ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐ(CBI)ಗೆ ವಹಿಸಿದೆ.

ಪ್ರಕರಣದ ವಿಚಾರಣೆಯನ್ನು ಮಣಿಪುರದಿಂದ ಹೊರಗೆ ನಡೆಸಲು ಆದೇಶಿಸುವಂತೆ ಸುಪ್ರೀಂ ಕೋರ್ಟ್ ಬಳಿ ಮನವಿ ಮಾಡಿಕೊಂಡಿದೆ. ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅಫಿಡವಿಟ್ ಸಲ್ಲಿಸಿದ್ದಾರೆ.

ಕೇಂದ್ರ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮಣಿಪುರದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ, ಹಿಂಸಾಚಾರ ಪ್ರಕರಣಗಳ ವಿಚಾರಣೆಯನ್ನು 6 ತಿಂಗಳೊಳಗೆ ಪೂರ್ಣಗೊಳಿಸುವಂತೆ ಆದೇಶಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಮಹಿಳೆಯರ ವಿರುದ್ಧದ ಅಪರಾಧ ವಿಶೇಷವಾಗಿ ಮಣಿಪುರದಲ್ಲಿ ನಡೆದಿರುವಂತಹ ಹೀನ ಅಪರಾಧವನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದಲ್ಲಿ ನ್ಯಾಯದಾನ ಮಾಡುವ ಮೂಲಕ ದೇಶದಲ್ಲಿ ಇಂತಹ ಘಟನೆ ಮರುಕಳಿಸದಂತೆ ಮಾಡಲಾಗುವುದು. ಪ್ರಕರಣದ ಸ್ವತಂತ್ರ ತನಿಖೆ ಆದೇಶಕ್ಕೆ ಇದು ಒಂದು ಕಾರಣ ಎಂದು ಕೇಂದ್ರ ಸರ್ಕಾರದ ಪರವಾಗಿ ತಿಳಿಸಿದರು.

INDIA ಒಕ್ಕೂಟ ಭೇಟಿ

ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾದ ಸಂಸದರ ತಂಡ ಜುಲೈ 29 ಮತ್ತು 30ರಂದು ಎರಡು ದಿನಗಳಕಾಲ ಮಣಿಪುರಕ್ಕೆ ಭೇಟಿ ನೀಡಲಿದೆ. 20ಕ್ಕೂ ಹೆಚ್ಚು ಸಂಸದರು ನಿಯೋಗದಲ್ಲಿ ಇರಲಿದ್ದಾರೆ. ಮಣಿಪುರ ಭೇಟಿ ನೀಡುವ ನಿಯೋಗವು ಅಲ್ಲಿನ ಪರಿಸ್ಥಿತಿಯ ಬಗ್ಗೆ ಈ ತಂಡ ಅವಲೋಕನ ನಡೆಸಲಿದೆ.

RELATED ARTICLES

Related Articles

TRENDING ARTICLES