Thursday, January 23, 2025

ಮೊಹರಂ ಮೆರವಣಿಗೆ ವೇಳೆ ಅವಘಡ, ನಾಲ್ವರು ಸಾವು

ಬೆಂಗಳೂರು : ಇಂದು ದೇಶದ್ಯಾಂತ ಮೊಹರಂ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಹಬ್ಬದ ನಡುವೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ.

ಜಾರ್ಖಂಡ್​​ನ ಬೊಕಾರೊ ಜಿಲ್ಲೆಯ ಪೀಟರ್‌ವಾರ್ ಬ್ಲಾಕ್‌ನ ಖೆಟ್ಕೊ ಗ್ರಾಮದಲ್ಲಿ ಇಂದು ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದು, 13 ಮಂದಿಗೆ ಸುಟ್ಟಗಾಯಗಳಾಗಿವೆ.

ಮೆರವಣಿಗೆಯಲ್ಲಿ ಹೊತ್ತೊಯ್ಯುತ್ತಿದ್ದ ತಾಜಿಯಾ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಈ ದುರಂತ ನಡೆದಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಸ್ಥಳಕ್ಕೆ ಧಾವಿಸಿದ ಬೊಕಾರೊನ ಪೊಲೀಸ್​​ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್​​ ಅವರು ಈ ಬಗ್ಗೆ ತನಿಖೆ ನಡೆಸಲಾಗಿದ್ದು, ಘಟನೆಯ ಬಗ್ಗೆ ವರದಿ ಪಡೆಯಲಾಗಿದೆ ಎಂದಿದ್ದಾರೆ.

RELATED ARTICLES

Related Articles

TRENDING ARTICLES