Wednesday, January 22, 2025

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ 158.81ಕೋಟಿ ರೂ.ಗಳ ಹೆಚ್ಚುವರಿ ಕಾಮಗಾರಿ ಶೀಘ್ರ: ಸಿಎಂ

ಮಂಡ್ಯ : ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ  ಕೆಲಸ ಪ್ರಾರಂಭವಾಗಲಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: ಸಿ.ಟಿ ರವಿಗೆ ರಾಜ್ಯಾಧ್ಯಕ್ಷ ಸ್ಥಾನ ಸಾಧ್ಯತೆ:ನಿಜವಾಯ್ತಾ ಮಾಜಿ ಪ್ರಧಾನಿ ಹೇಳಿಕೆ?

ಅವರು ಇಂದು ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು, ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್ ಗಳನ್ನು ಅಳವಡಿಸಿರಲಿಲ್ಲ. ಹಾಗಾಗಿ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆ ಯಾಗಿವೆ. ಜೂನ್ ತಿಂಗಳಲ್ಲಿ 20 ಅಪಘಾತಗಳಾಗಿದ್ದರೆ, ಜುಲೈನಲ್ಲಿ 5 ಅಪಘಾತಗಳು ಸಂಭವಿಸಿವೆ. ಸ್ಪೀಡ್ ಡಿಟೆಕ್ಟರ್ ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು  ಕಡಿಮೆ ಮಾಡಲು ಸಾಧ್ಯ.

ಮುಖ್ಯ ಕಾರ್ಯದರ್ಶಿಗಳು ಎನ್.ಹೆಚ್.ಎ. ಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿ ಸಭೆ  ನಡೆಯಲಿದೆ. ಎಕ್ಸ್ ಪ್ರೆಸ್ ವೇ ನಲ್ಲಿ ಕೆಲವು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು   ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ,  ಶ್ರೀರಂಗಪಟ್ಟಣ, ಬೈಪಾಸ್ ರಸ್ತೆಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರವೇಶ ಮತ್ತು ನಿರ್ಗಮನ ರಸ್ತೆಗಳನ್ನು ಮಾರ್ಚ್ ಮಾಹೆಯೊಳಗೆ ಪೂರ್ಣ ಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಟೋಲ್ ಸಂಗ್ರಹ: ಕೇಂದ್ರ ಹೆದ್ದಾರಿ ಸಚಿವರೊಂದಿಗೆ ಚರ್ಚೆ:

ಹೆದ್ದಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹವಾಗುತ್ತಿರುವ ಬಗ್ಗೆ ಮಾತನಾಡಿ ಎನ್.ಹೆಚ್.ಐ.ಎ ಅವರು ಸಂಗ್ರಹ ಮಾಡುವುದು. ದೆಹಲಿಗೆ ತೆರಳಿದಾಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಾತನಾಡುವುದಾಗಿ  ಭರವಸೆ ನೀಡಿದರು.

ಉಡುಪಿ  ಪ್ರಕರಣ: ಕಾನೂನಿನ ಪ್ರಕಾರ ಕ್ರಮ,

ಉಡುಪಿ ಪ್ರಕರಣದ ಬಗ್ಗೆ ಮಾತನಾಡಿ ಈಗಾಗಲೇ ಎಫ್.ಐ.ಆರ್.ದಾಖಲಾಗಿದ್ದು, ತನಿಖೆ ನಡೆಸಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

RELATED ARTICLES

Related Articles

TRENDING ARTICLES