ಬೆಂಗಳೂರು : ಕೆಜೆ ಹಳ್ಳಿ, ಡಿಜೆ ಹಳ್ಳಿ ವಿಚಾರವಾಗಿ ತನ್ವೀರ್ ಸೇಠ್ ಪತ್ರ ಬರೆದಿರುವ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನ್ಯಾಯಾಂಗ ತನಿಖೆ ಆಗಬೇಕು. ಇದು ಮತೀಯ ಗಲಭೆಯಲ್ಲ ಎಂದು ವರದಿ ಬಂದಿತ್ತು. ಎರಡು ತಂಡಗಳು ಡ್ರಗ್ಸ್ ಮಾಫಿಯಾ ನಡೆಸುತ್ತಿತ್ತು. ಡ್ರಗ್ಸ್ ಮಾರಾಟ ಮಾಡಲು ಆಗದವರು ಆ ದಿನ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ ಎಂದು ಅವರು ಹೇಳಿದ್ದಾರೆ.
ಅಂದಿನ ಬಿಜೆಪಿ ಸರ್ಕಾರ ಎನ್ಐಎ(NIA) ತನಿಖೆಗೆ ಕೊಟ್ಟಿದ್ದರು. ಯಾಕೆ ಅದನ್ನು ಎನ್ಐಎ(NIA) ತನಿಖೆಗೆ ಕೊಟ್ಟಿದ್ದು? ಅಲ್ಲೇನಾದರೂ ಕೊಲೆ ನಡೆದಿತ್ತಾ? ಹುಬ್ಬಳ್ಳಿ ವಿಚಾರವನ್ನು ಸಹ ಎನ್ಐಎ(NIA)ಗೆ ವಹಿಸಿದ್ದೀರಿ. ಹುಬ್ಬಳ್ಳಿಯಲ್ಲಿ ಎಸ್‍ಪಿಗೆ ಧಿಕ್ಕಾರ ಕೂಗಿದರೆ ಕೇಸ್ ಹಾಕಲಾಗಿದೆ. ಗೃಹ ಸಚಿವರು ಇದನ್ನು ನ್ಯಾಯಾಂಗ ತನಿಖೆ ಮಾಡಿಸಲಿ. ತಪ್ಪು ಎಂದು ಗೊತ್ತಾದರೆ ಗಲ್ಲಿಗೆ ಹಾಕಲಿ. ಈಗ ಅಮಾಯಕರನ್ನ ಒಳಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.