ಬೀದರ್ : ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥವಾಗಿರುವ ಜನ, ರೋಗಿಗಳ ಆರೋಗ್ಯ ವಿಚಾರಿಸಲು ಬ್ರಿಮ್ಸ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ.
ತಾಲೂಕಿನ ಬರಿದಾಬಾದ್, ಮೀನಕೇರಾ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಕಲುಷಿತ ನೀರು ಸೇವಿಸಿ 27 ಜನರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ವಸ್ಥರನ್ನು ಬ್ರಿಮ್ಸ್ ಜಿಲ್ಲಾಸ್ಪತ್ರೆಗೆ 19 ಜನ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 8 ಜನರನ್ನು ದಾಖಲಿಸಲಾಗಿದೆ. ಆದರೂ ಕೂಡ ಸರ್ಕಾರ ಇದಕ್ಕೆ ಶಾಶ್ವತ ಪರಿಹಾರ ನೀಡದೆ ಇರುವುದು ದುರ್ದೈವದ ಸಂಗತಿ.
ಇದನ್ನು ಓದಿ : ಮೈಸೂರು ಜಿಲ್ಲೆಯಲ್ಲಿ ಶುಂಠಿ ಬೆಳೆಗೆ ಕಳ್ಳರ ಕಾಟ
ಬಳಿಕ ಕಲುಷಿತ ನೀರು ಸೇವನೆ ಕುರಿತು ರೋಗಿಗಳಿಂದ ಮಾಹಿತಿ ಪಡೆದ ಅರಣ್ಯ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ.
ಅಸ್ವಸ್ಥವಾಗಿರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವುದಾಗಿ ಭರವಸೆಯನ್ನು ನೀಡಿದರು. ಪೌರಡಳಿತ ಸಚಿವ ರಹೀಂ ಖಾನ್, ಡಿಸಿ ಗೋವಿಂದರೆಡ್ಡಿ ಹಾಗೂ ಎಸ್ ಪಿ ಚನ್ನಬಸವಣ್ಣ ಲಂಗೋಟಿ ಅವರು ಖಂಡ್ರೆಯವರಿಗೆ ಸಾಥ್ ನೀಡಿದರು.