Wednesday, January 22, 2025

ಪಾಕಿಸ್ತಾನದಲ್ಲಿ ಬಾಂಬ್​ ಸ್ಪೋಟ : 39 ಸಾವು

ಪೇಶಾವರ: ಬಾಂಬ್ ಸ್ಫೋಟದಲ್ಲಿ ಕನಿಷ್ಠ 39 ಜನ ಸಾವನ್ನಪ್ಪಿದ್ದು ನೂರಾರು ಜನ ಗಾಯಗೊಂಡಿರುವ ಘಟನೆ ವಾಯುವ್ಯ ಪಾಕಿಸ್ತಾನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಇಸ್ಲಾಮಿಕ್ ಪಕ್ಷದ ರಾಜಕೀಯ ಸಮಾವೇಶದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರ: ಲಕ್ಷಾಂತರ ಮೌಲ್ಯ ಟೊಮೊಟೊ ತುಂಬಿದ್ದ ಲಾರಿ ನಾಪತ್ತೆ!

ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್(ಜೆಯುಐ-ಎಫ್)ಪಕ್ಷವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದ್ದು, ಅಫ್ಘಾನಿಸ್ತಾನ ಗಡಿ ಸಮೀಪವಿರುವ ಖಾರ್ ಪಟ್ಟಣದಲ್ಲಿ ನಡೆದ ಈ ಸಮಾವೇಶದಲ್ಲಿ 400ಕ್ಕೂ ಹೆಚ್ಚು ಸದಸ್ಯರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.

ಬಾಂಬ್​ ಸ್ಪೋಟದಿಂದ ಸಾವಿಗೀಡಾದ 39 ಮೃತ ದೇಹಗಳನ್ನು ಆಸ್ಪತ್ರೆಯಲ್ಲಿರಿಸಿದ್ದು, 123 ಮಂದಿ ಗಾಯಗೊಂಡಿದ್ದಾರೆ. ಆ ಪೈಕಿ 17 ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಎಂದು ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಆರೋಗ್ಯ ಸಚಿವ ರಿಯಾಜ್ ಅನ್ವರ್ ಅವರು (ಎಎಫ್‌ಪಿ)ಗೆ ತಿಳಿಸಿದ್ದಾರೆ. ಪ್ರಾಂತೀಯ ಗವರ್ನರ್ ಹಾಜಿ ಗುಲಾಂ ಅಲಿ ಅವರು ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದಾರೆ.

RELATED ARTICLES

Related Articles

TRENDING ARTICLES