Sunday, December 22, 2024

ಮಣಿಪುರ ಹಿಂಸಾಚಾರ ಖಂಡಿಸಿ ಕ್ರಿಶ್ಚಿಯನ್ ಸಮುದಾಯ ಪ್ರತಿಭಟನೆ

ಕಾರವಾರ : ಮಣಿಪುರ ಹಿಂಸಾಚಾರ ಖಂಡಿಸಿ ಕಾರವಾರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಕ್ರಿಶ್ಚಿಯನ್ ಸಮುದಾಯದ ನೂರಾರು ಮಂದಿ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಪ್ರತಿಭಟನೆಯಲ್ಲಿ ಮಣಿಪುರ ಮೂಲದ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರು ಸಹ ಭಾಗಿಯಾಗಿದ್ದರು. ಕಾರವಾರದ ಮಿತ್ರಸಮಾಜ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆದಿದ್ದು, ಕಾರವಾರ ಕ್ಯಾಥೋಲಿಕ್ ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಮಣಿಪುರ ಹಿಂಸಾಚಾರ ಖಂಡಿಸಿ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ 500ಕ್ಕೂ ಅಧಿಕ ಕ್ರಿಶ್ಚಿಯನ್ ಸಮುದಾಯದವರು ಭಾಗವಹಿಸಿದರು. ಪ್ರತಿಭಟನಾ ಮೆರವಣಿಗೆ ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಮನವಿ ಸಲ್ಲಿಸಿದರು.

RELATED ARTICLES

Related Articles

TRENDING ARTICLES