Sunday, December 22, 2024

ರಾಜಕೀಯ ತಿರುವು ಪಡೆದುಕೊಂಡ ‘ನಂದಿನಿ ತುಪ್ಪ’

ಬೆಂಗಳೂರು : ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ನಿಲ್ಲಿಸಿರುವ ವಿಷಯ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಚುನಾವಣೆಗೂ ಮುನ್ನ ನಂದಿನಿಯನ್ನು ದುರುಪಯೋಗ ಪಡಿಸಿಕೊಂಡ ಕಾಂಗ್ರೆಸ್, ಇಂದು ನಂದಿನಿಯ ಅಸ್ತಿತ್ವಕ್ಕೆ ಧಕ್ಕೆ ತರುತ್ತಿದೆ ಎಂದು ಕುಟುಕಿದೆ.

ನಂದಿನಿಗೆ ರಾಜಕೀಯ ಸ್ಪರ್ಶ ನೀಡಿದ ಪರಿಣಾಮ ಕೇರಳ ಮಾರುಕಟ್ಟೆಯನ್ನು ನಂದಿನಿ ಈಗಾಗಲೇ ಕಳೆದುಕೊಂಡಿದೆ. ಇದೀಗ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ನಿಲ್ಲಿಸುವ ಮೂಲಕ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದೆ ಎಂದು ಕಿಡಿಕಾರಿದೆ.

ಜಾತ್ಯಾತೀತ ಸೂತ್ರ

ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರಕ್ಕೆ ಬಂದಾಗ ಲಾಭ-ನಷ್ಟದ ಲೆಕ್ಕ ಹೇಳುವ ಕಾಂಗ್ರೆಸ್‌ ಇದೇ ಸೂತ್ರವನ್ನು ಇತರ ಧರ್ಮಗಳಿಗೆ ಅನ್ವಯಿಸಲು ಒಪ್ಪುವುದಿಲ್ಲ. ಹಿಂದೂಗಳೆಡೆಗೆ ತಾತ್ಸಾರ ತಮ್ಮ ಜಾತ್ಯಾತೀತ ಸೂತ್ರ ಎಂಬುದನ್ನು ಸಿದ್ದರಾಮಯ್ಯ ಅವರು ಈಗ ಮತ್ತೆ ರುಜುವಾತು ಮಾಡಿದ್ದಾರೆ ಎಂದು ಛೇಡಿಸಿದೆ.

ಸಿದ್ದರಾಮಯ್ಯ ತಾತ್ಸಾರ ನೀತಿ

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ ಕಾಂಗ್ರೆಸ್ ನೀತಿಯಿಂದಾಗಿ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತಗೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತಿರುಪತಿಯೊಂದಿಗಿನ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದ್ದು, ಹಿಂದೂಗಳೆಡಗಿನ ಸಿಎಂ ಸಿದ್ದರಾಮಯ್ಯ ಅವರ ತಾತ್ಸಾರ ನೀತಿ ರುಜುವಾತಾಗಿದೆ ಎಂದು ಕುಟುಕಿದ್ದಾರೆ.

RELATED ARTICLES

Related Articles

TRENDING ARTICLES