ಬೆಂಗಳೂರು : ಮಹಾನಗರ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ IAS, IPS, IFS ಅಧಿಕಾರಿಗಳ ಸಹಿ ನಕಲು ಮಾಡಿ ನಿಗಮಕ್ಕೆ 76.57 ಲಕ್ಷ ನಷ್ಟಉಂಟು ಮಾಡಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಲ್ಲಿ RPF ಪೇದೆಯಿಂದ ಗುಂಡಿನ ದಾಳಿ: 4 ಬಲಿ
ಸಾರಿಗೆ ನಿಗಮಕ್ಕೆ ನಷ್ಟುಉಂಟುಮಾಡಿದ ಆರೋಪದಡಿ ನಿಗಮದ ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕ ಸೇರಿ ಆರು ಮಂದಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಬಿಎಂಟಿಸಿ ಕೇಂದ್ರ ಕಚೇರಿಯ ಸಹಾಯಕ ಭದ್ರತಾ ಮತ್ತು ಜಾಗೃತಾ ಅಧಿಕಾರಿ ಸಿ.ಕೆ.ರಮ್ಯಾ ಅವರು ನೀಡಿದ ದೂರಿನ ಮೇರೆಗೆ ನಿಗಮದ ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕ ಶ್ರೀರಾಮ ಮುಲ್ಕಾವನ್, ವಿಭಾಗೀಯ ಸಂಚಲನ ಅಧಿಕಾರಿ ಶ್ಯಾಮಲಾ ಎಸ್.ಮದ್ದೋಡಿ, ಸಹಾಯಕ ಸಂಚಾರ ವ್ಯವಸ್ಥಾಪಕಿ ಬಿ.ಕೆ.ಮಮತಾ, ಸಹಾಯಕ ಸಂಚಾರ ಅಧೀಕ್ಷಕಿ ಟಿ.ಅನಿತಾ, ಸಂಚಾರ ನಿರೀಕ್ಷಕ ಸತೀಶ್, ಕಿರಿಯ ಸಹಾಯಕ ಪ್ರಕಾಶ್ ಕೊಪ್ಪಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.