Wednesday, January 22, 2025

ಮೋದಿ ದೇಶ ಬಿಟ್ಟು ಹೋಗಲಿದ್ದಾರೆ : ಲಾಲು ಪ್ರಸಾದ್

ಬೆಂಗಳೂರು : ಪ್ರಧಾನಿ ಮೋದಿ ದೇಶ ಬಿಟ್ಟು ಹೋಗುವ ಆಲೋಚನೆಯಲ್ಲಿದ್ದಾರೆ. ಅದಕ್ಕಾಗಿಯೇ ವಿವಿಧ ದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಆರ್​ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.

ಮೋದಿಯವರ ‘ಕ್ವಿಟ್ ಇಂಡಿಯಾ’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹೇಳಿಕೆ ನೀಡಿರುವ ಅವರು, ನರೇಂದ್ರ ಮೋದಿಯವರು 2024ರ ಲೋಕಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಲಿದ್ದಾರೆ. ಬಳಿಕ ವಿದೇಶಕ್ಕೆ ಹೋಗಿ ನೆಲೆಸಲಿದ್ದಾರೆ ಎಂದು ಕುಟುಕಿದ್ದಾರೆ.

ವಿರೋಧ ಪಕ್ಷಗಳು ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣ ರಾಜಕಾರಣದಿಂದ ಭಾರತ ಒಕ್ಕೂಟವನ್ನು ರಚಿಸುತ್ತಿವೆ ಎಂದು ಪ್ರಧಾನಿ ಆರೋಪಿಸಿದ್ದರು. ಇದಕ್ಕೆ ಪ್ರಸಾದ್ ಅವರು, ಮೋದಿ ಅವರು ದೇಶವನ್ನು ಬಿಟ್ಟು ಹೋಗುವ ಆಲೋಚನೆಯಲ್ಲಿದ್ದಾರೆ. ಅದಕ್ಕಾಗಿಯೇ ಅವರು ಹಲವಾರು ದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಅವರು ವಿಶ್ರಾಂತಿ ಪಡೆಯಲು ಸ್ಥಳವನ್ನು ಹುಡುಕುತ್ತಿದ್ದಾರೆ ಕಿಡಿಕಾರಿದ್ದಾರೆ.

ನಾನು ಬಿಜೆಪಿಯನ್ನು ಸೋಲಿಸಬೇಕು. ಒಗ್ಗಟ್ಟನ್ನು ಉಳಿಸಿಕೊಳ್ಳಬೇಕು ಮುಂದಿನ ತಿಂಗಳು ಮುಂಬೈನಲ್ಲಿ ನಡೆಯಲಿರುವ I.N.D.I.A ಒಕ್ಕೂಟದ ಸಭೆಯನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES