Tuesday, November 5, 2024

ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಹಾರಾಷ್ಟ್ರದ ಪುಣೆಗೆ ಭೇಟಿ ನೀಡಲಿದ್ದು, ಅನೇಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಮೋದಿ ಅವರಿಗೆ ಲೋಕಮಾನ್ಯ ತಿಲಕ್​​​ ರಾಷ್ಟ್ರೀಯ ಪ್ರಶಸ್ತಿಯನ್ನು ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ಪ್ರದಾನ ಮಾಡಲಿದೆ. ಜತೆಗೆ ಅವರು ಪುಣೆಯಯಲ್ಲಿರುವ ದಗ್ದುಶೇತ್​ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ದಗ್ದುಶೇತ್​ ದೇವಾಲಯದಲ್ಲಿ ಪೂಜೆ ಸಲ್ಲಿಸಿ, 11.45ಕ್ಕೆ ಲೋಕಮಾನ್ಯ ತಿಲಕ್​​​ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ನಂತರ 12.45ಕ್ಕೆ ನೂತನ ಮೆಟ್ರೋ ರೈಲು ಸಂಚಾರಕ್ಕೆ ಚಾಲನೆ ಮತ್ತು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಪುಣೆ ಮೆಟ್ರೋ ಮೊದಲ ಹಂತದ ಕಾರಿಡಾರ್​​ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ರೈಲು ಸಂಚಾರಕ್ಕೆ ಸಿದ್ಧಗೊಂಡಿದ್ದು, ನಾಳೆ ಪ್ರಧಾನಿ ಮೋದಿ ಮೆಟ್ರೋಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಲಿದ್ದಾರೆ.

RELATED ARTICLES

Related Articles

TRENDING ARTICLES