Saturday, November 23, 2024

ದಸರಾಗೆ ರಾಜಕೀಯ ಟಚ್ : 5 ಗ್ಯಾರಂಟಿಗಳ ಸ್ತಬ್ಧಚಿತ್ರಕ್ಕೆ ಒತ್ತು ನೀಡಲು ಸಿಎಂ ಸಲಹೆ

ಬೆಂಗಳೂರು : ದಸರಾ ಮಹೋತ್ಸವದಲ್ಲಿ ಸ್ತಬ್ಧಚಿತ್ರಗಳ ಆಯ್ಕೆ ಮಾಡುವಾಗ ಸರ್ಕಾರದ 5 ಗ್ಯಾರಂಟಿಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಮುಖ್ಯಂತ್ರಿ ಸಿದ್ದರಾಮಯ್ಯ ಹೇಳಿದರು.

ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಬೇಕು. ದಸರಾ ಜನರ ಉತ್ಸವವಾಗಬೇಕು. ಸ್ತಬ್ಧಚಿತ್ರಗಳ ಆಯ್ಕೆ ವೇಳೆ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆಗಳ ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶ ನೀಡಬೇಕು ಎಂದರು.

ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಒದಗಿಸಬೇಕು. ‘ಶಕ್ತಿ ಯೋಜನೆ’ಯಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ. ಯಾವುದೇ ತೊಂದರೆಗಳಾಗದಂತೆ ಎಲ್ಲ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಅ.15ರಂದು ದಸರಾ ಉದ್ಘಾಟನೆ

ದಸರಾ ಹಬ್ಬವನ್ನು  ಅಕ್ಟೋಬರ್ 15ರಂದು ಬೆಳಗ್ಗೆ 10.15 ರಿಂದ 10.30ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟಿಸಲಾಗುವುದು. ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.

ಏರ್​ ಶೋ ಆಯೋಜನೆ

ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳುವ ಉದ್ದೇಶವಿದೆ. ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು. ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರದ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ ಎಂದರು.

RELATED ARTICLES

Related Articles

TRENDING ARTICLES