Sunday, April 28, 2024

ತಿರುಪತಿಗೆ ತುಪ್ಪ ಸರಬರಾಜು ಸ್ಥಗಿತ ಸುದ್ದಿ ಕೇಳಿ ದುಃಖವಾಗಿದೆ : ಸಿ.ಟಿ. ರವಿ

ಚಿಕ್ಕಮಗಳೂರು : ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ ಸುದ್ದಿ ಕೇಳಿ ದುಃಖವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಬೇಸರ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಿರುಪತಿ ಪ್ರಸಾದಕ್ಕೆ ನಂದಿನಿ ತುಪ್ಪ ಸೇರುತ್ತೆ ಅನ್ನೋದೆ ಹೆಮ್ಮೆ ಸಂಗತಿ ಎಂದು ಹೇಳಿದ್ದಾರೆ.

ಸಹಕಾರ ಸಚಿವ ಕೆ.ಎನ್ ರಾಜಣ್ಣ, ಕೆಎಂಎಫ್ ಅಧ್ಯಕ್ಷರು ಪ್ರತಿಷ್ಠೆ ಬಿಟ್ಟು ಮಾತನಾಡಬೇಕು. ಪ್ರತಿಷ್ಠೆ ಬಿಟ್ಟು ಟಿಟಿಡಿ‌ ಜೊತೆ ಮಾತನಾಡುವಂತೆ ಸಲಹೆ ನೀಡುತ್ತೇನೆ. 50 ವರ್ಷದ ವ್ಯವಹಾರಿಕ ಸಂಬಂಧವನ್ನು ಮುಂದುವರಿಸಬೇಕು. ಸಲಹೆ ಸ್ವೀಕಾರ ಮಾಡದಿದ್ದರೆ ಹಾಲು ಉತ್ಪಾದಕರಿಗೆ ನಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ರಾಜಕೀಯ ತಿರುವು ಪಡೆದುಕೊಂಡ ‘ನಂದಿನಿ ತುಪ್ಪ’

ಶಾ ಹೇಳಿಕೆ ಅಪಪ್ರಚಾರ ಮಾಡಿದ್ರು

ರೈತರಿಗೆ ಸಹಾಯ ಮಾಡುವ ಸದುದ್ದೇಶದಿಂದ ಅಮುಲ್ ಮತ್ತು ನಂದಿನಿ ತಾಂತ್ರಿಕ ಸಹಕಾರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಸಲಹೆ ನೀಡಿದ್ದರು. ಆದ್ರೆ, ಚುನಾವಣೆ ವೇಳೆ ಅಮಿತ್ ಶಾ ಹೇಳಿಕೆ ಬಗ್ಗೆ ಅಪಪ್ರಚಾರ ಮಾಡಿದ್ರು. ಕಳೆದ 50 ವರ್ಷದಿಂದ ಟಿಟಿಡಿಗೆ ನಂದಿನಿ ತುಪ್ಪ ಪೂರೈಕೆ ಆಗುತ್ತಿದೆ. ಇದೀಗ, ತುಪ್ಪ ಸರಬರಾಜು ಸ್ಥಗಿತಗೊಳಿಸಿರುವುದು ನೋವಿನ ಸಂಗತಿ ಎಂದಿದ್ದಾರೆ.

ಬೆಲೆ ಏರಿಕೆ ಬರೆ ಎಳೆಯುತ್ತಾರೆ

ರಾಜ್ಯದ ಜನ ಅಧಿಕಾರ ಕೊಟ್ಟಿದ್ದು ನೀವು ಹೇಳಿದ ಗ್ಯಾರಂಟಿ ನಂಬಿ. ಬೆಲೆ ಏರಿಕೆ ಬರೆ ಎಳೆಯುತ್ತಾರೆ ಅಂತ ಯಾರೂ ಊಹಿಸಿರಲಿಲ್ಲ. ನಂದಿನಿ ಹಾಲಿನ ದರ ಹಾಗೂ ಅಬಕಾರಿ ಸುಂಕ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆ ಮಾಡಿ ಅಂತ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES