Wednesday, January 22, 2025

ಉಡುಪಿ ಪ್ರಕರಣ : ಅಶ್ಲೀಲ ಸಂದೇಶ ಕಳಿಸಿದ್ದವರ ವಿರುದ್ಧ ಎಫ್ಐಆರ್

ಬೆಂಗಳೂರು : ಉಡುಪಿ ಕಾಲೇಜಿನ​​ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶ ಕಳುಹಿಸಿದ್ದವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರತಿಭಟನೆಯಲ್ಲಿ ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಮಾತನಾಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ರವಾನೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧಪಟ್ಟ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜುಲೈ 28ರಂದು ಇನ್ಸ್ಟಾಗ್ರಾಮ್​​​ನಲ್ಲಿ ಬೆದರಿಕೆ ಮೆಸೇಜುಗಳು ಬಂದಿದ್ದವು. ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಾನಸಿಕ ನೆಮ್ಮದಿಗೆ ಭಂಗ ಉಂಟು ಮಾಡಲಾಗಿದೆ ಎಂದು ವಿದ್ಯಾರ್ಥಿನಿ ಹೇಳಿದ ಹಿನ್ನೆಲೆಯಲ್ಲಿ ದೂರು ದಾಖಲು ಮಾಡಲಾಗಿದೆ. ಈ ಸಂದೇಶದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೂ ಹಿಂದೂ ಸಂಘಟನೆಗಳು ಮಾಹಿತಿ ನೀಡಿವೆ. ಕೇಂದ್ರ ಸಚಿವೆ ಎಸ್‌ಪಿ ಜೊತೆ ಸಮಾಲೋಚನೆ ಮಾಡಿದ ಬಳಿಕ ಪ್ರಕರಣ ದಾಖಲು ಮಾಡಲಾಗಿದೆ.

RELATED ARTICLES

Related Articles

TRENDING ARTICLES