Monday, December 23, 2024

ಸೌಜನ್ಯ ಪ್ರಕರಣ: ಮೇಲ್ಮನವಿ ಸಲ್ಲಿಸುವ ಕುರಿತು ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಮಂಗಳೂರು : ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: ಸೌಜನ್ಯ ಪ್ರಕರಣ: ಇನ್ನು ಮುಂದೆ ಧರ್ಮಸ್ಥಳಕ್ಕೆ ಹೋಗೊಲ್ಲ ನಟ ದುನಿಯಾ ವಿಜಯ್​ ಪೋಸ್ಟ್​ ವೈರಲ್!​

ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು. ಕಾನೂನಿನ ಪ್ರಕಾರ  ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು.

ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ , ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.

ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಶಾಸಕರು, ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಇದ್ದರು.

RELATED ARTICLES

Related Articles

TRENDING ARTICLES