Wednesday, January 22, 2025

ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಕೋಲ್ಡ್​ವಾರ್ ಇತ್ತು : ಸತೀಶ್ ಜಾರಕಿಹೊಳಿ

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಕೋಲ್ಡ್​ವಾರ್ ಇದ್ದ ಬಗ್ಗೆ ಸ್ವತಃ ಸಚಿವ ಸತೀಶ್ ಜಾರಕಿಹೊಳಿ ಅವರೇ ಒಪ್ಪಿಕೊಂಡಿದ್ದಾರೆ.

ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜಕೀಯದಲ್ಲಿ ಎಲ್ಲಾ ಕಡೆ ಇದ್ದದ್ದೆ. ಎಲ್ಲಾ ಪಕ್ಷಗಳಲ್ಲೂ ಕೋಲ್ಡ್​​ವಾರ್, ಹಾಟ್​​​ವಾರ್ ಇದ್ದೇ ಇರುತ್ತದೆ ಎಂದು ತಿಳಿಸಿದ್ದಾರೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಚರ್ಚೆ ಆಗಬೇಕು. ಚುನಾವಣೆಗೆ ಸ್ಪರ್ಧಿಸುವವರಿಗೆ ಆಸಕ್ತಿಬೇಕು, ನಾವು ಹೇಳೋಕೆ ಆಗಲ್ಲ ಎಂದ ಹೇಳಿದ್ದಾರೆ.

ರಾಜ್ಯದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬುಲಾವ್ ವಿಚಾರವಾಗಿ ಮಾತನಾಡಿ, ನಾಳೆ ದೆಹಲಿಗೆ ಹೋಗುತ್ತಿದ್ದೇವೆ. ಲೋಕಸಭಾ ಚುನಾವಣೆ, ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಅದೆಲ್ಲ ಮುಗಿದು ಹೋದ ಅಧ್ಯಾಯ

ಶಾಸಕರು ದೂರು ನೀಡಿದ ವಿಚಾರ ಕುರಿತು ಮಾತನಾಡಿ, ಅದೆಲ್ಲ ಮುಗಿದು ಹೋದ ಅಧ್ಯಾಯ. ಸಿಎಂ ಇದರ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದು, ಸರಿ ಮಾಡೋದಾಗಿ ಹೇಳಿದ್ದಾರೆ. ಲೋಕಸಭಾ ಚುನಾವಣೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರದ್ದೇ ಜವಾಬ್ದಾರಿ ಎಂದಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ಉಳಿದ ಅಭಿವೃದ್ಧಿ ಕಾಮಗಾರಿಗೆ ಹಣ ಕೊಡಕ್ಕಾಗಲ್ಲ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅಭಿವೃದ್ಧಿ ಮಾಡಕ್ಕಾಗಲ್ಲ ಅಂತಲ್ಲ, ಅನುದಾನ ಜಾಸ್ತಿ ಮಾಡಕ್ಕಾಗಲ್ಲ. ಮಿನಿಮಮ್ ಏನಿದೆ ಅದನ್ನು ಮಾಡ್ತೀವಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES