Monday, December 23, 2024

ಸೌಜನ್ಯ ಪ್ರಕರಣ: ಇನ್ನು ಮುಂದೆ ಧರ್ಮಸ್ಥಳಕ್ಕೆ ಹೋಗೊಲ್ಲ ನಟ ದುನಿಯಾ ವಿಜಯ್​ ಪೋಸ್ಟ್​ ವೈರಲ್!​

ಬೆಂಗಳೂರು: ಇತ್ತೀಚೆಗೆ ಧರ್ಮಸ್ಥಳದ ಸೌಜನ್ಯ ಪ್ರಕರಣ ವಿಚಾರ ಹೆಚ್ಚು ಸದ್ದು ಮಾಡುತ್ತಿರುವ ಬೆನ್ನಲ್ಲೇ ಬಹುಭಾಷಾ ನಟ ದುನಿಯಾ ವಿಜಯ್​, ಇನ್ನು ಮುಂದೆ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಸದ್ಯ, ಈ ಪೋಸ್ಟ್ ಸಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇದನ್ನೂ ಓದಿ: ಡಯಾಲಿಸಿಸ್ ರೋಗಿಗಳೇ ಎಚ್ಚರ: ನಾಳೆಯಿಂದ ಡಯಾಲಿಸೀಸ್ ಸೇವೆ ಬಂದ್​!

ಅತ್ಯಾಚಾರಕ್ಕೆ ಒಳಗಾಗಿ ಭೀಕರವಾಗಿ ಹತ್ಯೆಗೀಡಾದ ವಿದ್ಯಾರ್ಥಿ ಸೌಜನ್ಯ ಪ್ರಕರಣ ದಿನದಿಂದ ದಿನಕ್ಕೆ ಬಾರಿ ಚರ್ಚೆಗೆ ಗ್ರಾಸವಾಗಿದೆ, ಇದೇ ಸೌಜನ್ಯ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದ್ದ ಸಂತೋಷ್​ ರಾವ್​ ನನ್ನು ನ್ಯಾಯಾಲಯ ನಿರಪರಾಧಿ ಎಂದು ಘೋಷಿಸಿದ್ದ ಬೆನ್ನಲ್ಲೇ ನಟ ದುನಿಯಾ ವಿಜಯ್​ ತಮ್ಮ ಫೇಸ್​ಬುಕ್​ ಖತೆಯಲ್ಲಿ ತಮ್ಮ ಅಭಿಪ್ರಾಯವನ್ನು ಬರೆದುಕೊಂಡಿದ್ದಾರೆ.

ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ.

ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ದ.

ಎಂದು ಬರೆದುಕೊಂಡು ಸೌಜನ್ಯ ಹಾಗು ಧರ್ಮಸ್ಥಳ ಮಂಜುನಾಥನ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅಸಮಧಾನವನ್ನು ಹೊರಹಾಕಿದ್ದಾರೆ. ಸದ್ಯ ಈ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

RELATED ARTICLES

Related Articles

TRENDING ARTICLES