Saturday, January 11, 2025

ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಬರಬಾರದು : ರಾಹುಲ್ ಎಚ್ಚರಿಕೆ

ನವದೆಹಲಿ : ಭ್ರಷ್ಟಾಚಾರ ವಿಚಾರದಲ್ಲಿ ಬಿಜೆಪಿ ವಿರುದ್ಧ ಹೋರಾಟ ಮಾಡಿದ್ದೇವೆ. ಹೀಗಾಗಿ, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಬರಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಾಕೀತು ಮಾಡಿದ್ದಾರೆ.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಖರ್ಗೆ ನೇತೃತ್ವದಲ್ಲಿ ನಡೆದ ರಾಜ್ಯ ಕಾಂಗ್ರೆಸ್​ ಹಿರಿಯ ನಾಯಕರ ಜೊತೆಗಿನ ಮೊದಲ ಹಂತದ ಸಭೆಯಲ್ಲಿ ಅವರು ಮಾತನಾಡಿದ್ದಾರೆ.

ಪಾರದರ್ಶಕ ಆಡಳಿತ ನೀಡಬೇಕು, ಹೈಕಮಾಂಡ್ ನಿಗಾ ವಹಿಸಲಿದೆ. ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಕಪ್ಪುಚುಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

20 ಸ್ಥಾನ ಗೆಲ್ಲುವ ಭರವಸೆ

ಬಡವರ ಪರವಾಗಿ ಕಾಂಗ್ರೆಸ್ ನಿಂತಿದೆ. ಈ ಹಿಂದೆಯೂ ಬಡವರ ಪರ ಕಾರ್ಯಕ್ರಮ ಕೊಟ್ಟಿದ್ದೆವು. ಈಗಲೂ ಅವರ ಪರ ಕಾರ್ಯಕ್ರಮ ಕೊಡಬೇಕು. ಈ ಬಾರಿ ಮಹಿಳೆಯರ ಪರ ಕಾರ್ಯಕ್ರಮ ರೂಪಿಸಿ ಗೆದ್ದಿದ್ದೇವೆ. ಹದಿನೈದರಿಂದ ಇಪ್ಪತ್ತು ಸೀಟು ಗೆಲ್ಲುವ ಬಗ್ಗೆ ಎಲ್ಲರೂ ಅಭಿಪ್ರಾಯ ಕೊಟ್ಟಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ.

ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ

ಎಐಸಿಸಿ ಕಚೇರಿಯಲ್ಲಿ ಸಭೆ ನಂತರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಪ್ರಮುಖವಾಗಿ ಚರ್ಚೆ ಮಾಡಿದ್ದೇವೆ. ಕನಿಷ್ಠ 20 ಸ್ಥಾನ ಗೆಲ್ಲುವುದಾಗಿ ಹೈಕಮಾಂಡ್​ಗೆ ಭರವಸೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES