Thursday, January 23, 2025

ಪತ್ನಿಯನ್ನ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ

ಆನೇಕಲ್ : ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಪತಿಯು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯದ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿಯ ಜನತಾಕಾಲೋನಿಯಲ್ಲಿ ನೆಡೆದಿದೆ.

ಜನತಾ ಕಾಲೋನಿಯಲ್ಲಿ ವಾಸವಾಗಿದ್ದ ಲಕ್ಷ್ಮಮ್ಮ(47) ಮೃತ ಮಹಿಳೆ. ವೆಂಕಟಸ್ವಾಮಿ (53) ಕೊಲೆ ಮಾಡಿದ ಆರೋಪಿ ಪತಿ. ಇಬ್ಬರು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರನ್ನು ಮದುವೆ ಮಾಡಿಕೊಟ್ಟಿದ್ದರು.

ಇದನ್ನು ಓದಿ : ಶೋಕಿಲಾಲ್ ಪ್ರಧಾನಿ ಅಂದ್ರೆ ಅದು ಮೋದಿ: ವಿ.ಎಸ್​ 

ದಂಪತಿಗಳ ನಡುವೆ ರಾತ್ರಿ ಕ್ಷುಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮನೆಯಲ್ಲಿದ್ದ ಮಚ್ಚಿನಿಂದ ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ ವೆಂಕಟಸ್ವಾಮಿ. ಬೆಳಗ್ಗೆ ಅಕ್ಕಪಕ್ಕದ ಮನೆಯವರು ನೋಡಿದ್ದು, ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಸರ್ಜಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES