ಬೆಂಗಳೂರು: ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ಬಳಿಕ ಆಶ್ರಯ ಕೋರಿ ನಗರಕ್ಕೆ ಆಗಮಿಸಿ ಸೇಂಟ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಉಳಿದುಕೊಂಡಿರುವ 29 ವಿದ್ಯಾರ್ಥಿಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ದತ್ತು ಪಡೆದಿದ್ದು ಸಂತ್ರಸ್ತ ವಿದ್ಯಾರ್ಥಿಗಳೊಂದಿಗೆ ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು.
ಇದನ್ನೂ ಓದಿ: ಪ್ರಶಸ್ತಿಯನ್ನು 140 ಕೋಟಿ ಭಾರತೀಯರಿಗೆ ಅರ್ಪಿಸುವೆ : ಪ್ರಧಾನಿ ಮೋದಿ
ಈ ವೇಳೇ ಮಾತನಾಡಿದ ಜಮೀರ್ ಅಹಮದ್ ಖಾನ್ ಮಣಿಪುರ ಸಂತ್ರಸ್ತ ವಿದ್ಯಾರ್ಥಿಗಳು ಎಲ್ಲಿಯವರೆಗೆ ಇಲ್ಲಿರುತ್ತಾರೋ ಅಲ್ಲಿವರೆಗೆ ಸಂಪೂರ್ಣ ಶಿಕ್ಷಣ ಮತ್ತು ದೈನಂದಿನ ಊಟ, ತಿಂಡಿ ಆರೈಕೆ ವ್ಯವಸ್ಥೆ ನೋಡಿಕೊಳ್ಳುವುದಾಗಿ ತಿಳಿಸಿದರು.
ಮಣಿಪುರದಿಂದ ಈಗಾಗಲೇ 200 ವಿದ್ಯಾರ್ಥಿಗಳು ಬಂದಿದ್ದು 29 ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ಆಶ್ರಯ ಪಡೆದಿದ್ದಾರೆ. ಉಳಿದವರಿಗೆ ಇದೇ ಸಂಸ್ಥೆಯ ಬೇರೆ ಕಡೆ ಆಶ್ರಯ ನೀಡಲಾಗಿದೆ. ಈ ವಿದ್ಯಾರ್ಥಿಗಳು ಏಳು ವರ್ಷ ಇಲ್ಲೇ ವಿದ್ಯಾಭ್ಯಾಸ ಪಡೆಯಲಿದ್ದಾರೆ ಎಂದರು.
ಇದೇ ವೇಳೆ ಸಚಿವರು ವಿದ್ಯಾರ್ಥಿಗಳಿಗೆ ಬಟ್ಟೆ ಹಾಗೂ ಫುಡ್ ಕಿಟ್‌ಹಾಗೂ ಇತರೆ ಅಗತ್ಯ ವಸ್ತು ವಿತರಿಸಿದರು.