Wednesday, January 22, 2025

ಸಾರಿಗೆ ನೌಕರರಿಗೆ ‘ಅರ್ಧ ಸಂಬಳ’ ಭಾಗ್ಯ : ಬೊಮ್ಮಾಯಿ ಕಿಡಿ

ಬೆಂಗಳೂರು : ಸಾರಿಗೆ ನೌಕರರಿಗೂ ಶಕ್ತಿ ಯೋಜನೆ ಎಫೆಕ್ಟ್ ತಟ್ಟಿದ್ದು, ಆರ್ಥಿಕ ಬರೆಯಿಂದ ನೌಕರರಿಗೆ ‘ಅರ್ಧ ಸಂಬಳ’ ಭಾಗ್ಯ ನೀಡಲಾಗಿದೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಶಕ್ತಿ ಯೋಜನೆ ಫಲಶೃತಿ ಸಾರಿಗೆ ನೌಕರರಿಗೆ ಅರ್ಧ ಸಂಬಳ. ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ ಎಂದು ಕುಟುಕಿದ್ದಾರೆ.

ಮುಂದಿನ ದಿನಗಳಲ್ಲಿ ಡಿಸೆಲ್ ಇಲ್ಲದೆ ಸಾರಿಗೆ ನಿಗಮಗಳು ಬಸ್ ಗಳನ್ನು ನಿಲ್ಲಿಸುವ ಪರಿಸ್ಥಿತಿ ಬರಲಿದೆ. ಸಾರಿಗೆ ನೌಕರರು ಸಂಬಳ ಇಲ್ಲದೆ ದುಡಿಯುವಂತದ್ದು ಹಾಗೂ ಕೆಟ್ಟ ಬಸ್ ಗಳು ರಸ್ತೆಯಲ್ಲಿ ನಿಲ್ಲುವ ದಿನಗಳು ದೂರವಿಲ್ಲ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES