Sunday, November 3, 2024

ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬದ ವಿರುದ್ದ ಅಪಪ್ರಚಾರ !: ಡಿ. ವೀರೇಂದ್ರ ಹೆಗ್ಗಡೆ

ಮಂಗಳೂರು : ರಾಜ್ಯದಲ್ಲಿ ಮತ್ತೆ ಸಂಚಲನ ಎಬ್ಬಿಸಿದ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಧರ್ಮಸ್ಥಳ ಕ್ಷೇತ್ರ ಹಾಗೂ ಹೆಗ್ಗಡೆ ಕುಟುಂಬದ ವಿರುದ್ಧ ಆರೋಪಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು  ಬೇಸರ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸೌಜನ್ಯ ಪ್ರಕರಣ: ಇನ್ನು ಮುಂದೆ ಧರ್ಮಸ್ಥಳಕ್ಕೆ ಹೋಗೊಲ್ಲ ನಟ ದುನಿಯಾ ವಿಜಯ್​ ಪೋಸ್ಟ್​ ವೈರಲ್!​

ಈ ಕುರಿತು, 2012‌ರಲ್ಲಿ ನಡೆದ ಸೌಜನ್ಯ ಹತ್ಯೆಗೆ ನ್ಯಾಯ ದೊರಕಿಸಿಕೊಡಲು ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ನಮ್ಮ ಕುಟುಂಬಸ್ಥರ ಪರವಾಗಿ ಸರ್ಕಾರವನ್ನು ಒತ್ತಾಯಿಸಲಾಗಿತ್ತು, ಉನ್ನತ ಮಟ್ಟದ ತನಿಖೆಗೆ ಸರ್ಕಾರವನ್ನು ಆಗ್ರಹಿಸಿದ್ದೆವು, ಸಿಐಡಿ ಬಳಿಕ ದೇಶದ ಅತ್ಯುನ್ನತ ತನಿಖಾ ಸಂಸ್ಥೆ ಸಿಬಿಐ ತನಿಖೆ ನಡೆಸಿತ್ತು.

ಇತ್ತೀಚೆಗೆ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದರಿಂದ ನಮ್ಮ ಕುಟುಂಬದ ವಿರುದ್ದ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ,  ಇದೀಗ ಮತ್ತೆ ಕ್ಷೇತ್ರ ಹಾಗೂ ನಮ್ಮ ಕುಟುಂಬದ ಮೇಲೆ‌ ಸುಳ್ಳು ಆರೋಪ ಮಾಡಲಾಗುತ್ತಿದೆ.

ಸೌಜನ್ಯಾ ಪ್ರಕರಣ ಸರ್ಕಾರ ಹಾಗೂ ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿದೆ, ಹೀಗಾಗಿ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಕೊಡುವಂತೆ ಒತ್ತಾಯಿಸುತ್ತೇನೆ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳಿಗೆ ಭಕ್ತರು ಹಾಗೂ ಸಾರ್ವಜನಿಕರು ಗೊಂದಲಕ್ಕೀಡಾಬೇಡಿ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಈ ಮೂಲಕ ಪತ್ರಿಕಾ ಹೇಳಿಕೆಯಲ್ಲಿ‌ ವಿನಂತಿಂತಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES