Thursday, December 19, 2024

ಎಐಸಿಸಿ ಸೋಶಿಯಲ್ ಮೀಡಿಯಾ ತಂಡಕ್ಕೆ ಭವ್ಯ ನರಸಿಂಹಮೂರ್ತಿ

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರೆ ಭವ್ಯಾ ನರಸಿಂಹಮೂರ್ತಿ ಅವರನ್ನು ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಸಂಯೋಜಕಿಯಾಗಿ ಆಯ್ಕೆ ಮಾಡಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಸೋಷಿಯಲ್ ಮೀಡಿಯಾ ತಂಡವನ್ನು ಪುನರ್ ರಚಿಸಿದ್ದು, ರಾಷ್ಟ್ರೀಯ ಸಮನ್ವಯಾಧಿಕಾರಿಗಳ ಪಟ್ಟಿಯಲ್ಲಿ ರಾಜ್ಯದಿಂದ ಭವ್ಯ ನರಸಿಂಹಮೂರ್ತಿ ಅವರಿಗೆ ಸ್ಥಾನ ನೀಡಿದ್ದಾರೆ.

37 ಸಮನ್ವಯಾಧಿಕಾರಿಗಳ ಪಟ್ಟಿ

ರಾಷ್ಟ್ರ ಮಟ್ಟದ 37 ಸಮನ್ವಯಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ದೊರೆತಿರುವುದಕ್ಕೆ ಸಂತಸ ಹಂಚಿಕೊಂಡಿರುವ ಭವ್ಯ ಅವರು, ಕಾಂಗ್ರೆಸ್​ ವರಿಷ್ಠರಿಗೆ ಧನ್ಯವಾದ ತಿಳಿಸಿದ್ದಾರೆ. ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಸಂಯೋಜಕಿಯಾಗಿ ನನ್ನನ್ನು ನೇಮಕಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್, ಪವನ್ ಖೇರ, ಸುಪ್ರಿಯಾ ಶ್ರೀನಾತೆ ಹಾಗೂ ಪ್ರಿಯಾಂಕ್ ಖರ್ಗೆ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಭವ್ಯ ನರಸಿಂಹಮೂರ್ತಿ ಅವರು ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದರು. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಕ್ರಿಯಾರಾಗಿದ್ದಾರೆ.

RELATED ARTICLES

Related Articles

TRENDING ARTICLES