ನವದೆಹಲಿ : ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಿತಿನ್ ಗಡ್ಕರಿ ಅವರು ತಮ್ಮ ಸಲಹೆಯನ್ನು ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ದೆಹಲಿಯಲ್ಲಿ ಇಂದು ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಸಂಬಂಧ ಮಹತ್ವದ ಚರ್ಚೆ ನಡೆಸಿದ್ದೇನೆ. ಬೆಂಗಳೂರಿನಲ್ಲಿ 4 ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿದ್ದು, ಈ ರಸ್ತೆಗಳ ಮೂಲಕ ಬೆಂಗಳೂರಿಗೆ ಹೆಚ್ಚಿನ ವಾಹನಗಳು ಆಗಮಿಸಿ ಸಂಚಾರ ದಟ್ಟಣೆಗೆ ಕಾರಣವಾಗಿವೆ ಎಂದಿದ್ದಾರೆ.
ಇದನ್ನೂ ಓದಿ : ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಯಡಿಯೂರಪ್ಪ
ಕೇಂದ್ರದ ಸಹಕಾರ ಬೇಕಿದೆ
ಈ ಸಂಚಾರ ದಟ್ಟಣೆ ನಿವಾರಣೆಗೆ ಕೇಂದ್ರ ಹೆದ್ದಾರಿ ಪ್ರಾಧಿಕಾರದ ಮೂಲಕ ಕ್ರಮ ಕೈಗೊಳ್ಳಬೇಕು. ಅದಕ್ಕೆ ಕೇಂದ್ರದ ಸಹಕಾರ ಬೇಕಿದೆ ಎಂದು ತಿಳಿಸಿದ್ದೇನೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸುರಂಗ ರಸ್ತೆ, ಫ್ಲೈ ಓವರ್ ಅಥವಾ ಇತರೆ ಮಾದರಿ ಯೋಜನೆ ಜಾರಿ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ತಿಳಿಸಿದ್ದಾರೆ ಅಂತ ಹೇಳಿದ್ದಾರೆ.
ಆಗಸ್ಟ್ 8 ಕೊನೆಯ ದಿನ
ಜುಲೈ 14ರಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿಯಿಂದ ಎಕ್ಸ್‌ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್ ಕರೆಯಲಾಗಿದೆ. ಟೆಂಡರ್ ಸಲ್ಲಿಕೆಗೆ ಆಗಸ್ಟ್ 8 ಕೊನೆಯ ದಿನವಾಗಿದೆ ಎಂದು ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.