Friday, May 17, 2024

ಎಲ್ಲಾ ಇಲಾಖೆಗಳಲ್ಲೂ ಏಜೆಂಟರು ಹುಟ್ಕೊಂಡಿದ್ದಾರೆ : ಬಿ.ಸಿ. ನಾಗೇಶ್

ಬೆಂಗಳೂರು : ಈ ಸರ್ಕಾರ ‌ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಮಾಜಿ‌ ಶಿಕ್ಷಣ ಸಚಿವ ಬಿ.ಸಿ.‌ನಾಗೇಶ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಎಲ್ಲ ಹಂತದಲ್ಲೂ ವರ್ಗಾವಣೆಯಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದ್ದಾರೆ.

ಶಾಸಕರು ಅಸಮಾಧಾನ ತೋಡಿಕೊಂಡಿರೋದು ಎಲ್ಲರಿಗೂ ಅರ್ಥವಾಗುತ್ತೆ. ಸಚಿವರು ಅವರವರೇ ಮಾತಾಡಿಕೊಂಡು ವರ್ಗಾವಣೆ ಮಾಡ್ಕೊಳ್ತಿದ್ದಾರೆ. ಡಿ ದರ್ಜೆ ನೌಕರರನ್ನೂ ಬಿಡದಂತೆ ವರ್ಗಾವಣೆ ದಂಧೆ ನಡೀತಿದೆ. ಇದರ ಬಗ್ಗೆ ನಾವು ಮಾತಾಡಿದರೆ ಸಾಕ್ಷ್ಯ ತನ್ನಿ ಅಂತಾರೆ. ಎಲ್ಲ ಇಲಾಖೆಗಳಲ್ಲೂ ವರ್ಗಾವಣೆಗೆ ಏಜೆಂಟರು ಹುಟ್ಕೊಂಡಿದ್ದಾರೆ ಎಂದು ದೂರಿದ್ದಾರೆ.

ಇದನ್ನೂ ಓದಿ : ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಬರಬಾರದು : ರಾಹುಲ್ ಎಚ್ಚರಿಕೆ

ಶಿಕ್ಷಕರ‌ ಬಗ್ಗೆ‌ ಯಾವುದೇ ಕಾಳಜಿ ಇಲ್ಲ

ಈ ಸರ್ಕಾರಕ್ಕೆ ವರ್ಗಾವಣೆ ದಂಧೆ ಬಿಟ್ಟು ಬೇರೆ ಕೆಲಸ ಇಲ್ಲ. ಶಿಕ್ಷಕರ ಅನೇಕ ಸಮಸ್ಯೆಗಳು ನ್ಯಾಯಾಲಯದಲ್ಲಿವೆ. ಇಲ್ಲಿಯವರೆಗೆ ಇದರ ಬಗ್ಗೆ ಅಡ್ವೊಕೇಟ್ ಜನರಲ್ ಜೊತೆ ಸಿಎಂ ಸಿದ್ದರಾಮಯ್ಯ ಒಂದು ಸಭೆಯನ್ನೂ ನಡೆಸಿಲ್ಲ. ಶಾಲಾ ಕಟ್ಟಡ ನಿರ್ಮಾಣಗಳು ಅರ್ಧಕ್ಕೆ ನಿಂತಿವೆ. ಶಿಕ್ಷಣ, ಶಿಕ್ಷಕರ‌ ಬಗ್ಗೆ‌ ಯಾವುದೇ ಕಾಳಜಿ ಇಲ್ಲ ಎಂದು ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES