Monday, December 23, 2024

WI vs IND : ಟೀಂ ಇಂಡಿಯಾಗೆ 150 ರನ್ ಟಾರ್ಗೆಟ್

ಬೆಂಗಳೂರು : ಟೀಂ ಇಂಡಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಸಾಧಾರಣ ಟಾರ್ಗೆಟ್ ದಾಖಲಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ 20 ಓವರ್​ ಗಳಲ್ಲಿ 6 ವಿಕೆಟ್ ಕಳೆದುಕೊಂಡು 149 ರನ್​ ಕಲೆಹಾಕಿತು. ವಿಂಡೀಸ್ ಪರ ರೋವ್‌ಮನ್ ಪೊವೆಲ್ 48, ನಿಕೋಲಸ್ ಪೂರನ್ 41 ಹಾಗೂ ಬ್ರಾಡನ್ ಕಿಂಗ್ 28 ರನ್ ಸಿಡಿಸಿದರು.

ಟೀಂ ಇಂಡಿಯಾ ಪರ ಯುಜ್ವೇಂದ್ರ ಚಹಲ್ ಹಾಗೂ ಅರ್ಷದೀಪ್ ಸಿಂಗ್ ತಲಾ 2 ವಿಕೆಟ್, ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು.

ಭಾರತ ತಂಡ (ಪ್ಲೇಯಿಂಗ್ 11)

ಶುಭ್​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್

ವೆಸ್ಟ್ ಇಂಡೀಸ್ (ಪ್ಲೇಯಿಂಗ್ 11)

ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್ (ನಾಯಕ), ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಝಾರಿ ಜೋಸೆಫ್, ಒಬೆಡ್ ಮೆಕಾಯ್

RELATED ARTICLES

Related Articles

TRENDING ARTICLES