Monday, December 23, 2024

ಇಂದು ಭಾರತ-ವಿಂಡೀಸ್ ಮೊದಲ ಟಿ-20 ಪಂದ್ಯ

ಬೆಂಗಳೂರು : ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ಇಂದಿನಿಂದ 5 ಪಂದ್ಯಗಳ ಟಿ-20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈಗಾಗಲೇ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಹಾಗೂ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿರುವ ಟೀಂ ಇಂಡಿಯಾ, ಟಿ-20 ಸರಣಿ ಮೇಲೂ ಕಣ್ಣಿಟ್ಟಿದೆ.

ಇಂದು ಟ್ರಿನಿಡಾಡ್​ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ಮೊದಲ ಟಿ-20 ಪಂದ್ಯ ನಡೆಯಲಿದೆ. ರೋಹಿತ್, ವಿರಾಟ್ ಕೊಹ್ಲಿ, ಸಿರಾಜ್, ಜಡೇಜಾ ಅವರಂತಹ ಹಿರಿಯ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಹೆಚ್ಚು ಯುವ ಆಟಗಾರರಿಂದಲೇ ಕೂಡಿದೆ.

ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದ್ದ ಯಶಸ್ವಿ ಜೈಸ್ವಾಲ್ ಟಿ-20 ಸರಣಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇಶಾನ್ ಕಿಶನ್ ಜೊತೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಶುಭ್​ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಆಡಬಹುದು. ಸೂರ್ಯಕುಮಾರ್ ಯಾದವ್ ಮಹತ್ವದ ಪಾತ್ರ ವಹಿಸಲಿದ್ದಾರೆ.

ವಿಕೆಟ್ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಇದ್ದು ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಮತ್ತೊಬ್ಬ ಆಲ್ ರೌಂಡರ್ ಆಗಿ ಅಕ್ಷರ್ ಪಟೇಲ್ ಇದ್ದಾರೆ.

RELATED ARTICLES

Related Articles

TRENDING ARTICLES