ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತವಾಗಿ ಬೆಂಗಳೂರಿನ ಸಸ್ಯಕಾಶಿ ಲಾಲ್ ಬಾಗ್ನಲ್ಲಿ ಆಯೋಜಿಸಲಾಗಿರುವ 214ನೇ ಫ್ಲವರ್ ಶೋ ನಾಳೆಯಿಂದ ಆರಂಭವಾಗಲಿದೆ.
ನಾಳೆ ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾಲ್ ಬಾಗ್ ಶೋ ಉದ್ಘಾಟಿಸಲಿದ್ದಾರೆ. ಆಗಸ್ಟ್ 4ರಿಂದ ಶುರುವಾಗಿ ಆಗಸ್ಟ್ 15ರ ವರೆಗೆ ಫ್ಲವರ್ ಶೋ ನಡೆಯಲಿದೆ. ಜನರಿಗೆ ಯಾವುದೇ ಸಮಸ್ಯೆಗಳಗಾದಂತೆ ಬಿಗಿ ಬಂದೋಬಸ್ತ್ ಮಾಡಲು ತೋಟಾಗಾರಿಕೆ ಇಲಾಖೆ ನಿರ್ಧರಿಸಿದೆ.
ಸಸ್ಯಕಾಶಿ ಲಾಲ್ ಬಾಗ್ನಲ್ಲಿ 76ನೇ ಸ್ವತಂತ್ರ ಮಹೋತ್ಸವದ ಹಿನ್ನೆಲೆಯಲ್ಲಿ 214ನೇ ಫ್ಲವರ್ ಶೋ ಆಯೋಜನೆ ಮಾಡಲಾಗಿದೆ. ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯಲ್ಲಿ ಈ ವರ್ಷದ ಫ್ಲವರ್ ಶೋ ಮೂಡಿ ಬರುತ್ತಿದೆ.
ಬರೋಬ್ಬರಿ 2 ಕೋಟಿ ಖರ್ಚು
ಇನ್ನು ಬರೋಬ್ಬರಿ 2 ಕೋಟಿ ಖರ್ಚು ಮಾಡುತ್ತಿದ್ದು, 69 ಬಗೆಯ ಹೂಗಳು ಈ ಬಾರಿ ಫ್ಲವರ್ ಶೋ ಅಂದವನ್ನ ಹೆಚ್ಚಿಸಲಿವೆ. ಈ ವರ್ಷ 10 ರಿಂದ 12 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದೆ. ಫಲಪುಷ್ಪ ಪ್ರದರ್ಶನದಲ್ಲಿ ಹಲವು ಕಲೆಗಳ ಸಾರುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಒಟ್ಟು 10 ದಿನಗಳ ಕಾಲ ಫ್ಲವರ್ ಶೋ ಇರಲಿದೆ.