ತುಮಕೂರು : ಕೊಬ್ಬರಿಗೆ 20 ಸಾವಿರ ರೂಪಾಯಿ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಂದ್ಗೆ ಕರೆ ನೀಡಿದ್ದಾರೆ. ಪಟ್ಟಣವನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ.
ತುಮಕೂರು ಜಿಲ್ಲೆ ಅತಿ ಹೆಚ್ಚು ತೆಂಗು ಬೆಳೆಯುವ ಜಿಲ್ಲೆಯಾಗಿದೆ. 18,000 ರೂ.ಗೆ ಮಾರಾಟವಾಗ್ತಿದ್ದ ಕೊಬ್ಬರಿ 7500 ರೂ.ಗೆ ಕುಸಿದಿದೆ. ನಫೆಡ್ನಲ್ಲಿ ಕೊಬ್ಬರಿ ಖರೀದಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ತಕ್ಷಣವೇ ನಫೆಡ್ನಲ್ಲಿ ಕೊಬ್ಬರಿ ಖರೀದಿಯನ್ನು ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ ಕೇವಲ 11,750 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಿದೆ. ಕನಿಷ್ಠ 20 ಸಾವಿರ ರೂಪಾಯಿ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.