ರಾಮನಗರ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತವರು ಜಿಲ್ಲೆಯಲ್ಲೇ ಬಸ್ ಕೊರತೆಯಾಗಿದೆ. ಅಗತ್ಯಕ್ಕೆ ತಕ್ಕಂತೆ ಬಸ್ ಇಲ್ಲದೇ ಪ್ರಯಾಣಿಕರು ಪರದಾಡುತ್ತಿರುವ ಹಿನ್ನೆಲೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ರಾಮನಗರ ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಬಸ್ ತಡೆದು ಪ್ರತಿಭಟನೆ ಮಾಡಿದ್ದಾರೆ. ಪ್ರತಿನಿತ್ಯ ಕಾಲೇಜು, ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಹಲವು ಬಾರಿ ಕೆಎಸ್ಸಾರ್ಟಿಸಿ (KSRTC) ಅಧಿಕಾರಿಗಳಿಗೆ ಮನವಿ ನೀಡಿದ್ರೂ ಯಾವುದೇ ಪ್ರಯೋಜನ ಆಗ್ತಿಲ್ಲ. ಸ್ಥಳಕ್ಕೆ ಶಾಸಕರು ಬರಬೇಕು. ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಿದ್ದಾರೆ.
ಸಾರಿಗೆ ಸೌಲಭ್ಯ ಒದಗಿಸುವಂತೆ ಪ್ರತಿಭಟನೆ
ಗ್ರಾಮಗಳಿಂದ ನಗರಕ್ಕೆ ಸಾರಿಗೆ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಹಾವೇರಿ ನಗರದಲ್ಲಿ ಎಸ್ಎಫ್ಐ(SFI) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ನಿತ್ಯ ಶಾಲೆ-ಕಾಲೇಜುಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಒದಗಿಸುವಂತೆ ಅಗ್ರಹಿಸಿ ಪ್ರತಿಭಟನೆ ಮಾಡಿದರು.
ಕಾಲೇಜು ತರಗತಿ ಬಹಿಸ್ಕರಿಸಿ ಸಾರಿಗೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ವಿದ್ಯಾರ್ಥಿಗಳು ಸರ್ಕಾರಕ್ಕೆ ಧಿಕ್ಕಾರ ಕೂಗಿದರು. ಕೂಡಲೇ ಸಾರಿಗೆ ಸೌಲಭ್ಯ ಒದಗಿಸಿ ಶಾಲೆ ಕಾಲೇಜು ಮಕ್ಕಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.